ಅಂಬೇಡ್ಕರ್ ಹಾದಿಯಲ್ಲಿ ಸಾಗೋಣ : ದಲಿತ ಮುಖಂಡ ಹೆಚ್.ರಾಜು ಕರೆ
ಚಳ್ಳಕೆರೆ : ಅಹಿಂಸಾತ್ಮಕ ಆಂದೋಲನಗಳ ಮುಂದಾಳತ್ವ ವಹಿಸಿ ಅಸ್ಪೃಶ್ಯರಿಗೆ ದೇವಾಲಯ ಪ್ರವೇಶದ ಹಕ್ಕು, ಸಾರ್ವಜನಿಕ ಕೆರೆ, ಬಾವಿಗಳಿಂದ ನೀರು ಸೇದುವ ಹಕ್ಕು ನೀಡಿದ ಮಹಾನ್ ಮಾನವಾತವಾದಿ ಡಾ.ಬಿ.ಆರ್.ಅಂಬೇಡ್ಕರ್ ಒಬ್ಬರು ಎಂದು ದಲಿತ ಮುಖಂಡ ಹೆಚ್.ರಾಜು ಹೇಳಿದ್ದಾರೆ.
ಅವರು ತಾಲೂಕಿನ ಜುಂಜರಗುAಟೆ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ಅಂಬೇಡ್ಕರ್ ಸೇನೆ ಸಮಿತಿ ಯುವಕರಿಂದ 66ನೇ ಡಾ.ಬಿ.ಆರ್.ಅಂಬೇಡ್ಕರ್ ಪರಿನಿಬ್ಬಾಣದ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು,
ನಾಸಿಕದಲ್ಲಿಯ ಕಾಳ ರಾಮನ ದೇವಸ್ಥಾನ ಮತ್ತು ಮಹಾಡದ ಚೌಡಾರ್ ಕೆರೆಯ ವಿಷಯವಾಗಿ ಅಸ್ಪೃಶ್ಯರನ್ನು ಹೊರಗಿಟ್ಟಿರುವರ ವಿರುದ್ಧ ಮಾಡಿದ ಆಂದೋಲನಗಳು ಗಮನಾರ್ಹವಾಗಿವೆ. ಸಹಸ್ರಾರು ಅಸ್ಪೃಶ್ಯ ಸತ್ಯಾಗ್ರಹಿಗಳು ಭಾಗವಹಿಸಿದ ಈ ಅಹಿಂಸಾತ್ಮಕ ಚಳುವಳಿಗಳಿಗೆ ಸವರ್ಣೀಯರು ಹಿಂಸಾತ್ಮಕವಾಗಿ ಪ್ರತಿಕ್ರಿಯಿಸಿದ್ದರು ಎಂದು ಸ್ಮರಿಸಿದರು.
ತಾಲೂಕು ಅಂಬೇಡ್ಕರ್ ಸೇನಾ ಸಮಿತಿಯ ಉಪಾಧ್ಯಕ್ಷರಾದ ಭೂತೇಶ್ ಮಾತನಾಡಿ, ಪ್ರಜಾಪ್ರಭುತ್ವವೆಂದರೆ ಸರ್ಕಾರದ ಒಂದು ರೂಪವೆಂದು ಅದು ಹುಟ್ಟಿದ ಪ್ರಾಚೀನತೆಯಿಂದ ಇಂದಿನ ಆಧುನಿಕತೆಯವರೆಗೂ ಕಲ್ಪಿಸಿಕೊಳ್ಳಲಾಗಿದೆ. ಆದರೆ ಪ್ರಜಾಪ್ರಭುತ್ವವು ಕೇವಲ ಸರ್ಕಾರದ ಒಂದು ರೂಪವಲ್ಲ. ಅದು ಪ್ರಮುಖವಾಗಿ ಸಹಬಾಳ್ವೆಯ ಸೊಗಸು ಮತ್ತು ಅನುಭವವನ್ನು ಪರಸ್ಪರ ದಟೈಸುವ ಒಂದು ಜೋಡಣಿ. ಮೂಲಭೂತವಾಗಿ ಅದು ಸಹವರ್ತಿಗಳೆಡೆಗೆ ತೋರುವ ಗೌರವಾದರ ಭಾವನೆ ಎಂದು ಹೇಳಿದ್ದಾರೆ.
ಇದೇ ಸಂಧರ್ಭದಲ್ಲಿ ಸಂದೀಪ್, ಸಂದೇಶ, ಶಿವುರಾಜ್, ತಿಪೇಶ್, ಪ್ರಸಾನ್ನಕುಮಾರ್, ಸತೀಶ್, ಹರೀಶ್, ಭೀಮರಾಜ್, ಶಿವಣ್ಣ, ಗುಜಾರಪ್ಪ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು