ಗ್ರಾಮೀಣ ಪ್ರತಿಭೆ ಹತ್ತನೇ ತರಗತಿ ವಿದ್ಯಾರ್ಥಿನಿ ಪ್ರಬಂದ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಚಳ್ಳಕೆರೆ : ಜಿಲ್ಲಾ ಮಟ್ಟದ 2022-23ನೇ ಶೈಕ್ಷಣಿಕ ಸಾಲಿನ ಚುನಾವಣಾ ಸಾಕ್ಷರತಾ ಕ್ಲಬ್ ಅಡಿಯಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆ ಸಂಬAಧ ಏರ್ಪಡಿಸಿದ ಪ್ರೌಢ ಶಾಲಾ ವಿಭಾಗದಲ್ಲಿ, ಹತ್ತನೇ ತರಗತಿ ದೀವ್ಯಮಣಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ
ತಾಲೂಕಿನ ಚನ್ನಮ್ಮನಾಗತಿಹಳ್ಳಿ ಗ್ರಾಮದ ಶ್ರೀಕೃಷ್ಣ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ದಿವ್ಯಮಣಿ ಜಿಲ್ಲಾ ಮಟ್ಟದಲ್ಲಿ ಪ್ರಬಂಧ (ಕನ್ನಡ )ಸ್ಪರ್ಧೆಯಲ್ಲಿ ಭಾಗವಹಿಸಿ, ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟಕೆ ಆಯ್ಕೆಯಾಗಿರುವುದರಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್. ಜಿಲ್ಲಾ ನೋಡಲ್ ಅಧಿಕಾರಿ ಚಂದ್ರಣ್ಣ, ತಾಲ್ಲೂಕು ನೋಡಲ್ ಅಧಿಕಾರಿ ಮಾರುತಿ ಬಂಡಾರಿ, ಶಾಲೆಯ ಮುಖ್ಯ ಶಿಕ್ಷಕ ವೀರಭದ್ರಯ್ಯ, ಹಾಗೂ ಸಹ ಶಿಕ್ಷಕರು ವಿದ್ಯಾರ್ಥಿನಿಯನ್ನು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.

About The Author

Namma Challakere Local News
error: Content is protected !!