ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ರವರು ಚಳ್ಳಕೆರೆ ತಾಲೂಕಿನ ಹಾಲಿಗೊಂಡನಹಳ್ಳಿ ಗ್ರಾಮದಲ್ಲಿ ನಡೆದ ಶ್ರೀತುಪ್ಪದ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಮತ್ತು ಶ್ರೀಆಂಜನೇಯಸ್ವಾಮಿ ಕಾರ್ತಿಕೋತ್ಸವದ ಪ್ರಯುಕ್ತ ನಡೆದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪೂಜಿ ಸಲ್ಲಿಸಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ರಮೇಶ್‌ಗೌಡ, ಗ್ರಾಮ ಪಂಚಾಯತ್ ಸದಸ್ಯ ಅಂಜನಪ್ಪ, ತ್ಯಾಗರಾಜ್ ಹಾಗೂ ಮುಖಂಡರುಗಳಾದ ಗುಜ್ಜಾರಪ್ಪ, ತಿಪ್ಪೇಸ್ವಾಮಿ, ದೊಡ್ಡರಂಗಪ್ಪ, ಚಟ್ಟೆಕಂಬ ಆಂಜನೇಯ ಮತ್ತು ಮುಖಂಡರು, ಕಾರ್ಯಕರ್ತರು, ಹಾಗೂ ಯುವಕರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.