ಚಳ್ಳಕೆರೆ : ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ಗ್ರಾಮದೇವತೆ ಶ್ರೀ ಚೌಡೇಶ್ವರಿ ದೇವಿಯ ಕಾರ್ತಿಕೋತ್ಸವ ಅಂಗವಾಗಿ ಸಾವಿರಾರ ಭಕ್ತರ ಸಮ್ಮುಖದಲ್ಲಿ ಸಂಪನ್ನಗೊAಡ ರಥೋತ್ಸವ.
ಹೌದು ಬಯಲು ಸೀಮೆ ಚಳ್ಳಕೆರೆ ತಾಲೂಕಿನಲ್ಲಿ ಡಿಸೆಂಬರ್ ತಿಂಗಳಲ್ಲಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಗ್ರಾಮ ದೇವತೆಗಳ ಕಾರ್ತಿಕೋತ್ಸವ ಸಂಭ್ರಮ ಸಡಗರದಿಂ ಜರುಗಿದವು.
ಕೋಡಿಹಳ್ಳಿ ಗ್ರಾಮದ ಪ್ರಮುಖ ರಾಜ ಬೀದಿಗಳಲ್ಲಿ ಮೆರವಣಿಗೆ ಮೂಲಕ ಸಾಗಿ ಬಂದ ರಥೋತ್ಸವಕ್ಕೆ ಭಕ್ತಧಿಗಳಿಂದ ಮಾಲಾರ್ಪಣೆ ಮಾಡಲಾಯಿತು..
ಈ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಯುವಕ ಸಂಘದ ಎಲ್ಲಾ ಪದಾಧಿಕಾರಿಗಳು, ಹಟ್ಟಿಯ ಯಜಮಾನರು ಮತ್ತು ಮುಖಂಡರು, ಯುವಕರು, ಸರ್ಕಾರಿ ಹಾಗೂ ಖಾಸಗಿ ನೌಕರರು, ಹಿರಿಯ ಕಲಾವಿದರು ಮಹಿಳಾ ಸಂಘಗಳ ಪದಾಧಿಕಾರಿಗಳು, ಸರ್ವ ಸದಸ್ಯರು ಹಾಗೂ ಗ್ರಾಮದ ಸಮಸ್ತ ನಾಗರೀಕ ಬಂಧುಗಳು ಹಾಜರಿದ್ದರು.