ಚಳ್ಳಕೆರೆ ತಾಲೂಕಿನ ಕಾಲುವೆಹಳ್ಳಿ ಗ್ರಾಮದಲ್ಲಿ ಬಂಡೆ ಬಸವೇಶ್ವರಸ್ವಾಮಿ ಕಾರ್ತಿಕ ಹಾಗೂ ರಥೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.
ಪ್ರತಿವರ್ಷದಂತೆ ಈ ವರ್ಷವೂ ಸಹ ಈ ಜಾತ್ರ ಮಹೋತ್ಸವ ಕಾರ್ಯಕ್ರಮವನ್ನು ಸಾವಿರಾರು ಭಕ್ತರ ನಡುವೆ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.
ಊರಿನ ಹೊರ ಭಾಗದಲ್ಲಿ ನೆಲೆಸಿರುವಂತಹ ಬಂಡೆ ಬಸವೇಶ್ವರಸ್ವಾಮಿಯ ಕಾರ್ತಿಕೋತ್ಸವದ ಹಿನ್ನೆಲೆಯಲ್ಲಿ ಸ್ವಾಮಿಯ ರಥವನ್ನು ವಿವಿಧ ಹೂಗಳಿಂದ ಹಾಗೂ ಬಣ್ಣ ಬಣ್ಣದ ಬಟ್ಟೆಗಳಿಂದ ಅಲಂಕರಿಸಲಾಗಿತ್ತು, ನಂತರ ಸ್ವಾಮಿಯ ಕಳಸರೋಹಣ ನಂತರ ಮುಕ್ತಿ ಭಾವುಟ ಅರಾಜು ಮಾಡಲಾಯಿತು, ಮುಕ್ತಿ ಬಾವುಟ ಹರಾಜು ನಂತರ ಚಳ್ಳಕೆರೆ ತಹಶೀಲ್ದಾರ್ ಎನ್.ರಘುಮೂರ್ತಿ ರಥೋತ್ಸವಕ್ಕೆ ಚಾಲನೆ ನೀಡುವ ಮೂಲಕ ತಮ್ಮ ಭಕ್ತಿಯನ್ನು ಸಮರ್ಪಿಸಿದರು.

ನಂತರ ರಥಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಭಾರತ ಒಂದು ಧಾರ್ಮಿಕ ಹಿನ್ನೆಲೆ ಉಳ್ಳಂತಹ ದೇಶವಾಗಿದ್ದು ಅದರಲ್ಲೂ ಗ್ರಾಮೀಣ ಭಾಗದಲ್ಲಿ ಈ ಹಬ್ಬ ಜಾತ್ರೆ ಹರಿದಿನಗಳಿಗೆ ವಿಶೇಷವಾದ ಸ್ಥಾನವನ್ನು ನೀಡಲಾಗುತ್ತಿದೆ. ಚಳ್ಳಕೆರೆ ಹಾಗೂ ಮೊಳಕಾಲ್ಮೂರು ಕ್ಷೇತ್ರ ವ್ಯಾಪ್ತಿಯ ಅತಿ ಹೆಚ್ಚು ಪರಿಶಿಷ್ಟ ಜಾತಿ ಪರಿಶಿಷ್ಟ ಸಮುದಾಯ ಹಾಗೂ ಇತರೆ ಸಮುದಾಯಗಳು ವಾಸ ಮಾಡುತ್ತಿದ್ದು ಅದರಲ್ಲೂ ಹಬ್ಬ ಅರಿದಿನಗಳಲ್ಲಿ ಒಬ್ಬರಿಗೊಬ್ಬರು ಅರ್ಥ ಮಾಡಿಕೊಂಡು ಸಹ ಬಾಳ್ವೆಯಿಂದ ಹಬ್ಬಗಳನ್ನು ಆಚರಣೆ ಮಾಡಲಾಗುತ್ತದೆ.

ಅದರಂತೆ ಇಂದು ಕಾಲುವೇಹಳ್ಳಿ ಗ್ರಾಮದಲ್ಲಿ ಬಂಡೆ ಬಸವೇಶ್ವರ ಕಾರ್ತಿಕೋತ್ಸವದ ಹಿನ್ನೆಲೆಯಲ್ಲಿ ಈ ರಥೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಆಚರಣೆ ಮಾಡಲಾಗಿದೆ ಈ ಕಾರ್ಯಕ್ರಮಕ್ಕೆ ಸಾವಿರಾರು ಭಕ್ತರು ಆಗಮಿಸಿ ತನು ಮನ ಧನವನ್ನು ಅರ್ಪಿಸಿದ್ದಾರೆ ಎಂದರು.

ಈ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ಮಾಜಿ ಶಾಸಕ ಎಸ್ ತಿಪ್ಪೇಸ್ವಾಮಿ, ತಹಶೀಲ್ದಾರ್ ಎನ್.ರಘುಮೂರ್ತಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಜೆಪಿ ಜಯಪಾಲಯ್ಯ, ಕಾಂಗ್ರೆಸ್ ಮುಖಂಡ ಯೋಗೇಶ್ ಬಾಬು ಮಾಜಿ ತಾಪಂ.ಸದಸ್ಯ ಕಾಲುವೆಹಳ್ಳಿ ಶ್ರೀನಿವಾಸ್, ಕೆಪಿ.ಹೇಮಣ್ಣ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪಾಲಯ್ಯ, ಪಿಡಿಒ ಪಾಲಯ್ಯ, ರಂಗಸ್ವಾಮಿ, ಸಿಪಿಐ. ಜಿ.ಬಿ.ಉಮೇಶ, ರೈತ ಮುಖಂಡ ಕೆಪಿ.ಭೂತಯ್ಯ, ಕಾಲುವೆಹಳ್ಳಿ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಭಕ್ತರು ಇದ್ದರು.

Namma Challakere Local News

You missed

error: Content is protected !!