ನಾಯಕನಹಟ್ಟಿ:: ಕಾಂಗ್ರೆಸ್ ಪಕ್ಷ 2023 ರಲ್ಲಿ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದ ಖಚಿತ ಓಬಿಸಿ ಜಿಲ್ಲಾಧ್ಯಕ್ಷ ಎನ್‍ ಡಿ ಕುಮಾರ್ ಹೇಳಿದ್ದಾರೆ.
ಅವರು ಪಟ್ಟಣದ ಯಾತ್ರಿ ನಿವಾಸದಲ್ಲಿ ಹಿಂದುಳಿದ ವರ್ಗಗಳ ವಿಭಾಗದ ಪದಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿ 2023ರ ಸಾವರ್ತಿಕ ಚುನಾವಣೆ ಸಮೀಪಿಸುತ್ತಿದ್ದು ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ತಳಕು ಮತ್ತು ನಾಯಕನಹಟ್ಟಿ ಬ್ಲಾಕ್ ಒಬಿಸಿ ಕಾರ್ಯಕರ್ತರು ಪಕ್ಷ ಸಂಘಟನೆಯನ್ನು ಬೂತ್ ಮಟ್ಟದಿಂದ ಹೆಚ್ಚಿನದಾಗಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಕಾರ್ಯಕರ್ತರು ಕಂಕಣಭದ್ಧರಾಗಿ ಕಾರ್ಯನಿರ್ವಹಿಸಬೇಕು ಸ್ಥಳೀಯ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರೊಂದಿಗೆ ಬೆರೆತು ಪಕ್ಷ ಸಂಘಟನೆಯ ಈ ಭಾಗದಲ್ಲಿ ಮುನ್ನಡೆಸಲು ಹಿರಿಯರ ಮಾರ್ಗದರ್ಶನ ಅತ್ಯಂತ ಮುಖ್ಯವಾದದ್ದು ಓಬಿಸಿ ಜಿಲ್ಲಾಧ್ಯಕ್ಷ ಎನ್ ಡಿ ಕುಮಾರ್ ಎಂದರು.
ಪ್ರಾಸ್ತವಿಕ ನುಡಿಯನ್ನು ಜೋಗಿಹಟ್ಟಿ ಡಿ ಜಿ ಗೋವಿಂದಪ್ಪ ಮಾತನಾಡಿ ಕಳೆದ 5 ವರ್ಷದಿಂದ ಬಿಜೆಪಿ ಭ್ರಷ್ಟಾಚಾರದಲ್ಲಿ ಮುಳುಗಿದೆ 40% ಸರ್ಕಾರ ನೋಟ್ ಬ್ಯಾನ್ ಹೀಗೆ ಹಲವಾರು ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಸರ್ಕಾರ ನಮ್ಮ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಕ್ಷೇತ್ರದಲ್ಲಿ ಅಭಿವೃದ್ಧಿ ಎಂಬುದು ಶೂನ್ಯವಾಗಿದೆ, ಆದ್ದರಿಂದ ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಪ್ರತಿ ಮನೆಮನೆಗೆ ತೆರಳಿ ಕಾಂಗ್ರೆಸ್ ಪಕ್ಷದ ಯೋಜನೆಗಳ ಜನಸಾಮಾನ್ಯರಿಗೆ ತಿಳಿಸುವಂತೆ ಆಗಬೇಕು ಮತ್ತೆ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಅಧಿಕಾರಕ್ಕೆ ಬರುತ್ತದೆ ಎಂದು ತಿಳಿಸಿದರು.

ಇದೆ ವೇಳೆ ಸಭೆಯ ಅಧ್ಯಕ್ಷತೆ ವಹಿಸಿದ ತಳಕು ಮತ್ತು ನಾಯಕನಹಟ್ಟಿ ಓಬಿಸಿ ಅಧ್ಯಕ್ಷ ಎಚ್ ಬಿ ತಿಪ್ಪೇಸ್ವಾಮಿ ಮಾತನಾಡಿ ನಮ್ಮ ಕಾಂಗ್ರೆಸ್ ಪಕ್ಷದ ಅಧಿಕಾರದ ಅವಧಿಯಲ್ಲಿ ನೇರವಾಗಿ ಜನಸಾಮಾನ್ಯರಿಗೆ ಮುಟ್ಟುವಂತ ಯೋಜನೆಗಳನ್ನ ಸನ್ಮಾನ್ಯ ಸಿದ್ದರಾಮಯ್ಯನವರು ಬಡವರಿಗೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದರು ಅನ್ನಭಾಗ್ಯ ಕ್ಷೀರ ಭಾಗ್ಯ ವಿದ್ಯಾಸಿರಿ ಹೀಗೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದು ಸತತ ಐದು ವರ್ಷಗಳ ಕಾಲ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸೌಲಭ್ಯಗಳು ಸಿಗುವಂತಾಗಿತ್ತು ಕಾಂಗ್ರೆಸ್ ಪಕ್ಷದ ಓಬಿಸಿ ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ಹೆಚ್ಚಾಗಿ ತೊಡಗಬೇಕು ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

ಇದೇ ವೇಳೆ ಹೋಬಳಿಯ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಜಿ ಬಿ ಮುದಿಯಪ್ಪ, ಟಿ ಬಸಪ್ಪ ನಾಯಕ ಮಾಜಿ ಪಟ್ಟಣ ಪಂಚಾಯತಿ ಸದಸ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ ಜಿ ಬೋರನಾಯಕ, ಆರ್ ಬಸಪ್ಪ ಎಸ್ ಸಿ ವಿಭಾಗ ಅಧ್ಯಕ್ಷೆ, ಟಿ ರಂಗಪ್ಪ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಗೌಡಗೆರೆ, ಮಲ್ಲೂರಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಬಿ ಕಾಟಯ್ಯ, ಹುರುಳಿ ತಿಪ್ಪೇಸ್ವಾಮಿ ಜೋಗಿಹಟ್ಟಿ, ಓಬಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ ಟಿ ತಿಪ್ಪೇಸ್ವಾಮಿ ಗೌಡಗೆರೆ, ಮೂರ್ತಿ ಒಬಿಸಿ ಅಧ್ಯಕ್ಷರು ಮೊಳಕಾಲ್ಮೂರು, ಶಿವರಾಜ್, ರಾಮಕೃಷ್ಣ, ರಾಜುನಾಯಕ ವೆಂಕಟೇಶ್, ಇಮ್ರಾನ್, ಗಂಗಣ್ಣ ಟಿ ಕೆ ಹಳ್ಳಿ, ನಾಗರಾಜ್ ಗಿರಿಯಮ್ಮನಹಳ್ಳಿ, ಹನುಮಂತಪ್ಪ ದೊಡ್ಡ ಉಳ್ಳಾರ್ತಿ ,ಸೇರಿದಂತೆ ಇತರರು ಇದ್ದರು

About The Author

Namma Challakere Local News
error: Content is protected !!