ನಿಮ್ಮ ಅರ್ಹತೆಗೆ ತಕ್ಕ ಉದ್ಯೋಗ ಪಡೆದುಕೊಳ್ಳಿ : ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗಾಯುಕ್ತಾಲಯ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆ ಅಡಿಯಲ್ಲಿ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಚಿತ್ರದುರ್ಗ ಹಾಗೂ ಎಸ್.ಎ.ಎಂ. ಪಾಲಿಟೆಕ್ನಿಕ್ ಚಳ್ಳಕೆರೆ ಇವರ ಸಂಯುಕ್ತಾಶ್ರಯದಲ್ಲಿ ಇಂದು ಚಳ್ಳಕೆರೆಯಲ್ಲಿ ಆಯೋಜಿಸಿದ್ದ ” 2023 ರ ಉದ್ಯೋಗ ಮೇಳವನ್ನು, ಸ್ಥಳೀಯ ಶಾಸಕ ಟಿ. ರಘುಮೂರ್ತಿ ಉದ್ಘಾಟಿಸಿ, ಮಾತನಾಡಿದರು.
ನಿಮ್ಮ ವ್ಯಾಸಂಗ ಮುಗಿದ ಮೇಲೆ ಉದ್ಯೋಗಕ್ಕಾಗಿ ಅಲೆಯದೆ ನಿಮ್ಮ ನೆಚ್ಚಿನ ಉದ್ಯೋಗ ಪಡೆಯಲು ನಿಮ್ಮ ಸ್ಥಳಕ್ಕೆ ಆಗಮಿಸಿರುವುದು ಸಂತಸ ತಂದಿದೆ, ನಿಮ್ಮ ವ್ಯಾಸಂಗಕ್ಕೆ ಅನುಗುಣವಾಗಿ ಉತ್ತಮ ಶ್ರೇಣಿಯಲ್ಲಿ ಉದ್ಯೋಗ ಪಡೆದುಕೊಳ್ಳಿ ಎಂದರು.
ತಹಶೀಲ್ದಾರ್ ಎನ್.ರಘುಮೂರ್ತಿ, ಬುಟಕಟ್ಟು ಸಂಪ್ರಾದಾಯಗಳೇ ಹೆಚ್ಚಿರುವ ಚಳ್ಳಕೆರೆ ತಾಲೂಕಿನಲ್ಲಿ ವಿದ್ಯಾರ್ಥಿಗಳ ವ್ಯಾಸಂಗ ಮಾಡಿದ ಮೇಲೆ ಸುಕ ಸುಮ್ಮನೆ ಮನೆಯಲ್ಲಿ ಕೂರದೆ ಇಂತಹ ಉದ್ಯೋಗ ಮೇಳದಲ್ಲಿ ಭಾಗವಹಿಸಿ ನಿಮ್ಮ ಅರ್ಹತೆಗೆ ತಕ್ಕಂತೆ ಉದ್ಯೋಗ ಪಡೆದು ತಂದೆ ತಾಯಿಗಳಿಗೆ ನೆರವಾಗಿ ಎಂದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಸುಮಕ್ಕ ಅಂಜಿನಪ್ಪ, ಸದಸ್ಯ ಮಲ್ಲಿಕಾರ್ಜುನ್, ರಮೇಶ್‌ಗೌಡ, ತಹಶೀಲ್ದಾರ್ ಎನ್.ರಘುಮೂರ್ತಿ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಅಧಿಕಾರಿಗಳಾದ ಕಿಶೋರ್‌ಕುಮಾರ್, ಜಿಲ್ಲಾ ಚೇಂಬರ ಕಾಮರ್ಸ್ ಸದಸ್ಯ ಸತೀಶ್‌ಬಾಬು, ಉಪನ್ಯಾಸಕರು ಮತ್ತು ಸಾರ್ವಜನಿಕರು ಮತ್ತು ಉದ್ಯೋಗ ಆಕಾಂಕ್ಷಿಗಳು ಉಪಸ್ಥಿತರಿದ್ದರು.