ಚಳ್ಳಕೆರೆ ತಾಲೂಕಿನ ಪರಶುರಾಂಪುರ. ದೊಡ್ಡಚೆಲ್ಲೂರು .ನಗರಂಗೆರೆ . ದೊಡ್ಡ ಉಳ್ಳಾರ್ತಿ ಗ್ರಾಮದಲ್ಲಿ ಮನೆ ಮನೆ ಬಾಗಿಲಿಗೆ ಇ.ಸ್ವತ್ತು ಖಾತೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಜಿ ಪಂ ಸಿಇಒ ದಿವಾಕರ್,
ಗ್ರಾಮ ಪಂಚಾಯತಿ ವ್ಯಾಪ್ತಿಯ ಆಸ್ತಿಗಳ ನೋಂದಣಿ ವೇಳೆ ನಡೆಯುತ್ತಿದ್ದ ಅಕ್ರಮಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಇ-ಸ್ವತ್ತು ಎಂಬ ತಂತ್ರಾAಶವನ್ನು ರೂಪಿಸಿದೆ.
ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಆಸ್ತಿ ಮಾಲೀಕರ ಮನೆ ಬಾಗಿಲಿಗೆ ಇ-ಸ್ವತ್ತು ಪತ್ರ ವಿತರಣೆ ಕಾರ್ಯಕ್ರಮ ಜಿಲ್ಲೆಯ ಎಲ್ಲಾ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿನ ಗ್ರಾಮೀಣ ಭಾಗದಲ್ಲಿ ಮನೆ ಮಾಲೀಕರ ಮನೆ ಬಾಗಿಲಿಗೆ ತೆರಳಿ ಆಸ್ತಿಗೆ ಸಂಬAಧಿಸಿದ ಇ –ಸ್ವತ್ತು ಪ್ರಮಾಣ ಪತ್ರ ವಿತರಿಸುವ ವಿನೂತನ ಕಾರ್ಯಕ್ರಮದಿಂದ ಗ್ರಾಮೀಣ ಜನರ ಮೆಚ್ಚಿಗೆಗೆ ಪಾತ್ರರಾಗಿದ್ದು ಗ್ರಾಪಂ ಅಭಿವೃದ್ಧಿ ಅದಿಕಾರಿಗಳು ಸಹ ಇ-ಸ್ವತ್ ಕಾರ್ಯಕ್ರಮ ಯಶಸ್ವಿಗೊಳಿಸಲು ಮುಂದಾಗಿದ್ದಾರೆ ಎಂದರು.
ಇತ್ತೀಚೆಗೆ ಗ್ರಾಮ ಪಂಚಾಯಿತಿಯಲ್ಲಿ ಇ-ಸ್ವತ್ತು ವಿತರಣೆಗೆ ಅನಾವಶ್ಯಕ ವಿಳಂಬ ಮತ್ತು ಮದ್ಯವರ್ತಿಗಳ ಹಾವಳಿ ಹೆಚ್ಚಾಗಿರುವುದು ಗಮನಕ್ಕೆ ಬಂದಿತು. ಆದ್ದರಿಂದ ಮನೆ ಬಾಗಿಲಿಗೆ ವಿತರಣೆ ಮಾಡುವ ಯೋಜನೆ ರೂಪಿಸಲಾಯಿತು. ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳು ನಿವಾಸಿಗಳ ದಾಖಲೆಗಳನ್ನು 10 ರಿಂದ 15 ದಿನ ಮೊದಲೇ ಪಡೆದು, ನಿಯಮಾನುಸಾರ ಪರಿಶೀಲಿಸಿ, ಆಸ್ತಿ ಮಾಲೀಕರು ಎಲ್ಲಾ ತೆರಿಗೆಯನ್ನು ಪಾವತಿಸಿದ ನಂತರ, ಅವರ ಮನೆ ಮನೆಗೆ ಖುದ್ದು ಭೇಟಿ ನೀಡಿ, ಇ-ಸ್ವತ್ತು ವಿತರಣೆಗೆ ಕ್ರಮ ವಹಿಸಲು ಸೂಚಿಸಲಾಗಿದೆ’ ಎಂದು ತಿಳಿಸಿದರು.
ಇ-ಸ್ವತ್ತು ಪಡೆಯಲು ಮೊದಲು ತುಂಬಾ ಕಷ್ಟವಾಗುತ್ತಿತ್ತು. ಆದರೆ ಅಧಿಕಾರಿಗಳೇ ಮನೆ ಬಾಗಿಲಿಗೆ ಬಂದು ಇ-ಸ್ವತ್ತು ವಿತರಣೆಗೆ ಕ್ರಮ ವಹಿಸಿರುವುದರಿಂದ ತುಂಬಾ ಸಂತೋಷವಾಗಿದೆ ಎಂದು ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದರು.
ಪಂಚಾಯಿತಿಗಳಲ್ಲಿ ನಡೆಯುವ ಭ್ರಷ್ಟಾಚಾರ ಹಾಗೂ ವಿಳಂಬ ನೀತಿಯಿಂದ ಜಿಲ್ಲಾ ಪಂಚಾಯಿತಿಯನ್ನು ನೋಡುವ ದೃಷ್ಟಿಕೋನವೇ ಬದಲಾಗಿತ್ತು. ಇದೀಗ ಇಂತಹ ಸೇವಾ ಕಾರ್ಯದಿಂದ ಜನರ ಅಭಿಪ್ರಾಯ ಬದಲಾಗಿದ್ದು, ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಈಯೋಜನೆಯಿಂದ ಗ್ರಾಮಪಂಚಾಯತ್ ಬೊಕ್ಕಸಕ್ಕೆ ತೆರಿಗೆ ಹಣ ಸಂಗ್ರಹದಿAದ ಗ್ರಾಮಗಳ ಅಭಿವೃದ್ಧಿ ಯಾಗಲು ಸಾಧ್ಯವಾಗುತ್ತದೆ. ಗ್ರಾಮೀಣ ಜನರು ಗ್ರಾಪಂ ಕಚೇರಿಗೆ ಬಂದಾಗ ಗೌರವದಿಂದ ಕಾಣುವ ಜತೆಗೆ ಸಕಾಲಕ್ಕೆ ಕೆಲಸ ಮಾಡಿಕೊಡಿ ಗ್ರಾಮದಲ್ಲಿ ನೀರು.ಬೆಳಕು.ಸ್ವಚ್ಚತೆ.ವಸತಿ ಸೇರಿದಂತೆ ಸರಕಾರದಿಂದ ಬರುವ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿದಾಗ ನಿಮ್ಮ ಮೇಲೆ ಯಾವುದೇ ದೂರುಗಳು ಬರುವುದಿಲ್ಲ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ನರೇಗಾ. ಗ್ರಂಥಾಲಯ. ಅಂಗನವಾಡಿ. ಕಚೇರಿಗಳಲ್ಲಿನ ವಿವಿಧ ಯೋಜನೆಯ ಕಡತ ಸಿಬ್ಬಂದಿ ಹಾಜರಾತಿ ಪರಿಶೀಲನೆ ನಡೆಸಿದರು. ಕಾರ್ಯಕ್ರಮದಲ್ಲಿ ತಾಪಂ ಇಒ ಹೊನ್ನಯ್ಯ.ಸಹಾಯಕ ನಿರ್ದೇಶಕ ಸಂತೋಷ್. ಪಿಡಿಒ ಗಳಾದ ದೇವರಾಜ್.ಗುಂಡಪ್ಪ ಗ್ರಾಪಂ ಅಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು