ಚಿತ್ರದುರ್ಗ : ನಾಯಕನಹಟ್ಟಿ ಗ್ರಾಮದಲ್ಲಿ ದಿನಾಂಕ:21, 22 ಜನವರಿ 2023, ಎರಡು ದಿನ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಜಿಲ್ಲಾ ಕಸಾಪ ಸಮ್ಮೇಳನದ ಲೋಗೋ ಬಿಡುಗಡೆಗೊಳಿಸಿದರು.
ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ, ಗೌ.ಕಾರ್ಯದರ್ಶಿ ಕೆಪಿಎಂ.ಗಣೇಶಯ್ಯ, ಕೋಶಾಧ್ಯಕ್ಷ ಚೌಳೂರು ಲೋಕೇಶ್, ಸಂಚಾಲಕ ಶ್ರೀನಿವಾಸ್ ಮಳಲಿ, ಹಿರಿಯ ಪತ್ರಕರ್ತ ಟಿಕೆ.ಬಸವರಾಜ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಗೌಡಿಗೆರೆ, ಮಾಜಿ ಅಧ್ಯಕ್ಷರಾದ ಲಕ್ಷ್ಮಣ್, ನರೇನಹಳ್ಳಿ ಅರುಣ್ ಕುಮಾರ್, ಡಯಟ್ ಕಾಲೇಜಿನ ಅಧ್ಯಾಪಕ ನಾಗರಾಜ್ ಮುಂತಾದವರು ಉಪಸ್ಥಿತರಿದ್ದರು.