ಚಳ್ಳಕೆರೆ : ಗ್ರಾಮದ ಅಭಿವೃದ್ದಿಗೆ ಪ್ರತಿಯೊಬ್ಬರು ಶ್ರಮಿಸಬೇಕು, ಆದರಂತೆ ಗ್ರಾಮದ ಮಕ್ಕಳಿಗೆ ಸಾಂಸ್ಕೃತಿಕ ಚಟುವಟಿಕೆಗಳಿಗೆ ಅನುಕೂಲವಾಗಲೆಂದು ಸಮುದಾಯ ಭವನ ನಿರ್ಮಾಣ ಮಾಡಲಾಗಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ಅವರು ತಮ್ಮ ಮತಕ್ಷೇತ್ರವಾದ ತುರುವನೂರು ಹೋಬಳಿಯ ಕೂನಬೇವು ಗ್ರಾಮದಲ್ಲಿ ನಡೆದ ವಾಲ್ಮೀಕಿ ಭವನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಸುಮಾರು 20.ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಈ ಕಟ್ಟಡವನ್ನು ಸಾರ್ವಜನಿಕರು ಉಪಯೋಗಿಸುವ ಮೂಲಕ ಸದ್ಬಳಕೆ ಮಾಡಿಕೊಳ್ಳಬೇಕು, ಗ್ರಾಮದಲ್ಲಿ ಮೂಲಭೂತ ಸೌಲಭ್ಯಗಳ ಜೊತೆಗೆ ಅಗತ್ಯವಾದ ಸೌಕರ್ಯಗಳನ್ನು ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಕಾಶ್, ಉಪಾಧ್ಯಕ್ಷೆ ನಿಂಗಮ್ಮ ಹಾಗೂ ಸದಸ್ಯರುಗಳು ಅರ್ಚನಾ, ರಂಗಸ್ವಾಮಿ, ತಿಪ್ಪೇಸ್ವಾಮಿ, ಬಾಲಣ್ಣ, ಪದ್ಮ, ಮಲ್ಲಣ್ಣ, ಮತ್ತು ಮುಖಂಡರುಗಳು ಮಾಂತೇಶ, ಸತೀಶ, ಮಲ್ಲಿಕಾರ್ಜುನ, ನಾಗರಾಜ, ಉಮೇಶ ಉಪಸ್ಥಿತರಿದ್ದರು.