ಚಳ್ಳಕೆರೆ : ಜಿಲ್ಲಾ ಮತ್ತು ತಾಲೂಕು ಆಡಳಿತ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಹಾಗೂ ಚಳ್ಳಕೆರೆ ಇವರ ವತಿಯಿಂದ 2020-21ನೇ ಸಾಲಿನ ಕೇಂದ್ರ ಪುರಸ್ಕೃತ ಯೋಜನೆಯ ಸ್ವಯಂ ಉದ್ಯೋಗ ಯೋಜನೆ ಅಡಿ ಆಯ್ಕೆಯಾದ ಪರಿಶಿಷ್ಟ ವರ್ಗಗಳ ಫಲಾನುಭವಿಗಳಿಗೆ ಕುರಿ/ಮೇಕೆ ವಿತರಣ ಕಾರ್ಯಕ್ರಮದಲ್ಲಿ ಶಾಸಕ ಟಿ.ರಘುಮೂರ್ತಿ ಪಾಲ್ಗೊಂಡು ವಿತರಣೆ ಮಾಡಿದರು.
ನಗರದ ಶಾಸಕರÀ ಭವನದ ಆವರಣದಲ್ಲಿ ಆಯೋಜಿಸಿದ್ದ ಪರಿಶಿಷ್ಟ ವರ್ಗಗಳ ಫಲಾನುಭವಿಗಳಿಗೆ ಕುರಿ/ಮೇಕೆ ವಿತರಣಾ ಕಾರ್ಯಕ್ರಮದಲ್ಲಿ ಸುಮಾರು ತಾಲೂಕಿನ 89ಫಲಾನುಭವಿಗಳಿಗೆ ಕುರಿಗಳನ್ನು ವಿತರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಪರಿಶಿಷ್ಟ ವರ್ಗಗಳ ಅಧಿಕಾರಿಗಳಾದ ಪಶು ಸಂಗೋಪನ ಇಲಾಖೆ ಅಧಿಕಾರಿಗಳಾದ ರೇವಣ್ಣ, ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ಹಾಗೂ ಮುಖಂಡರು, ಕಾರ್ಯಕರ್ತರು ಮತ್ತು ಆಯ್ಕೆಯಾದ ಫಲಾನುಭವಿಗಳು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!