ಚಳ್ಳಕೆರೆ : ರಾಷ್ಟ್ರ ನಿರ್ಮಾಣದ ಜವಾಬ್ದಾರಿಯುತ ಸ್ಥಾನದಲ್ಲಿದ್ದು ರಾಷ್ಟ್ರಹಿತಕ್ಕೆ ಧಕ್ಕೆಯಾಗುವ ಯಾವುದೇ ವಿಷಯಗಳಲ್ಲಿ ದುರ್ಬಲನೀತಿ ಹೊಂದಿರಬಾರದೆAಬ ಸುಭಾಷ್‌ರ ದಿಟ್ಟ ನಿಲುವಿನ ಪ್ರತಿಧ್ವನಿಯಾಗಿತ್ತು ಆತ್ಮಾಭಿಮಾನದ ಸ್ವರಾಜ್ಯ ಹೋರಾಟಕ್ಕೆ ಬಲತುಂಬಿದವರು ಸುಭಾಷರು ಎಂದು ನೇತಾಹಿ ಸ್ನೇಹ ಬಳಗದ ಅಧ್ಯಕ್ಷ ನೇತಾಜಿ ಪ್ರಸನ್ನ ಹೇಳಿದ್ದಾರೆ.
ಅವರು ನಗರದ ಬೆಂಗಳೂರು ರಸ್ತೆಯಲ್ಲಿರುವ ಬನಶ್ರೀ ವೃದ್ದಾಶ್ರಮದಲ್ಲಿ ಇಂದು ನೇತಾಜಿ ಹುಟ್ಟು ಹಬ್ಬದ ಅಂಗವಾಗಿ ವೃದ್ದರಿಗೆ ಆಹಾರದ ಕಿಟ್ ನೀಡುವ ಮೂಲಕ ನೇತಾಜಿ ಜನ್ಮ ದಿನದ ಶುಭಾಷಯಗಳನ್ನು ಕೊರಿದರು.
ನಂತರ ಮಾತನಾಡಿದ ಅವರು ತಾನು ಕಷ್ಟಪಟ್ಟುಗಳಿಸಿದ್ದ ಐ.ಸಿ.ಎಸ್. ಪದವಿಯನ್ನೇ ತಿರಸ್ಕರಿಸಿ, ಸ್ವಾತಂತ್ರ‍್ಯ ಸಂಗ್ರಾಮಕ್ಕೆ ಧುಮುಕಿದ ಬೋಸ್‌ರಿಗಿದ್ದ ರಾಜಕೀಯ ಚಿಂತನೆಯ ವೈಶಾಲ್ಯತೆ ಆ ಕಾಲಮಾನದ ಯಾರೊಬ್ಬರಲ್ಲೂ ಇರಲಿಲ್ಲ. ಆಸ್ಟ್ರಿಯಾ, ಇಂಗ್ಲೆAಡ್, ಜರ್ಮನಿ, ಜಪಾನ್ ಸೇರಿದಂತೆ ಹತ್ತಾರು ರಾಷ್ಟ್ರಗಳಲ್ಲಿ ಮಿಂಚಿನ ಓಡಾಟ ನಡೆಸಿ ಭಾರತೀಯ ಸ್ವರಾಜ್ಯ ಹೋರಾಟದ ದನಿಗೆ ತೀವ್ರತೆ ತಂದಿದ್ದ ಬೋಸರು, ತಾನು ನಂಬಿದ್ದ ಕ್ರಾಂತಿಪಥದಲ್ಲಿ ಎಂದೂ ರಾಜಿಮಾಡಿದವರಲ್ಲ ಎಂದರು.

ಸಮಾಜ ಸೇವಕ ಪಂಚಮುಖಿ ಬಾಬು ಮಾತನಾಡಿ, ಶೀಘ್ರ ಸ್ವಾತಂತ್ರ‍್ಯಪ್ರಾಪ್ತಿಗಾಗಿ ಅವರು ಮಂಡಿಸುತ್ತಿದ್ದ ವಾದಗಳು, ಅದಕ್ಕಾಗಿ ಶ್ರಮಿಸಬೇಕಾದ ತ್ವರಿತ ಸಿದ್ಧತೆಗಳ ಕುರಿತು ಬೋಸ್‌ರ 1938ರಲ್ಲಿ ಭಾರತದ ವಿಭಜನೆಯ ಮುಸ್ಲಿಂಲೀಗ್- ಬ್ರಿಟಿಷರ ತಂತ್ರಗಾರಿಕೆಯ ಕುರಿತು ಮೊದಲಬಾರಿಗೆ ಬಹಿರಂಗವಾಗಿ ಎಚ್ಚರಿಸಿದರು ಎಂದರು.
ಇದೇ ಸಂಧರ್ಭದಲ್ಲಿ ಶಿಕ್ಷಕಿ ರೇಣುಕಾ ನೇತಾಜಿ, ಕುಮಾರಿ ಅಪ್ಸರ ನೇತಾಜಿ, ಬನಶ್ರೀ ಆಶ್ರಮದ ಮುಖ್ಯಸ್ಥರಾದ ಮಂಜುಳಾ ಇತರರು ಬಾಗಿಯಾಗಿದ್ದರು.

About The Author

Namma Challakere Local News
error: Content is protected !!