ಚಳ್ಳಕೆರೆ ತಾಲೂಕಿನ ಸಾಣಿಕೆರೆ ಗ್ರಾಮದಲ್ಲಿ ನಡೆದ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಶಂಕುಸ್ಥಾಪನ ಸಮಾರಂಭದಲ್ಲಿ ಶಾಸಕ ಟಿ.ರಘುಮೂರ್ತಿ ಪಾಲ್ಗೊಂಡು ಮಾತನಾಡಿದರು.
ಕರ್ನಾಟಕ ಆರೋಗ್ಯ ಪದ್ಧತಿ ಅಭಿವೃದ್ಧಿ ಮತ್ತು ಸುಧಾರಣಾ ಯೋಜನೆ, ಬೆಂಗಳೂರು, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಚಿತ್ರದುರ್ಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಚಿತ್ರದುರ್ಗ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳು ಚಳ್ಳಕೆರೆ ಇವರ ಸಂಯುಕ್ತ ಆಶ್ರಯದಲ್ಲಿ ಸಾಣೀಕೆರೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ನಡೆದ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಶಂಕುಸ್ಥಾಪನಾ ನೆರೆವೆರಿಸಿದರು.
ಮನುಷ್ಯ ನಿಗೆ ಅತ್ಯಗತ್ಯವಾದ ಮೂಲ ಭೂತ ಸೌಲಭ್ಯಗಳಲ್ಲಿ ಒಂದಾದ ಆರೋಗ್ಯ ಕಾಳಜಿ
ಮನುಷ್ಯನ ಆರೋಗ್ಯಕ್ಕೆ ಮುಖ್ಯ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೃತಿ ಚಂದ್ರಕಾಂತ್, ಉಪಾಧ್ಯಕ್ಷ ನಾಗರಾಜ್ ಡಿ, ಹಾಗೂ ನಗರಸಭೆ ಸದಸ್ಯರಾದ ರಮೇಶ್ ಗೌಡ, ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ಎಚ್ ಆಂಜನೇಯ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಧರ, ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ. ಕಾಶಿ, ಸಾಣಿಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳಾದ ಎನ್ಪಿ ನಾಗರಾಜ್, ಮುಖಂಡರು, ಕಾರ್ಯಕರ್ತರು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.