ಚಳ್ಳಕೆರೆ : ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿ ಗೊಳಪಡಿಸಿ ಹಂತಹAತವಾಗಿ ಖಾಯಂಗೊಳಿಸುವAತೆ ಆಗ್ರಹಿಸಿ ಫೆ.1ರಿಂದ ಕಸ ಸಾಗಿಸುವ ವಾಹನ ಚಾಲಕರು ನೀರು ಸರಬರಾಜು ಸಹಾಯಕರು ಲೋಡರ್ಸ್ ಕೀನರ್ಸ್ ಹೆಲ್ಸರ್ಸ್ ಒಳಚರಂಡಿ ಕಾರ್ಮಿಕರು ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರು ಅನಿರ್ದಿಷ್ಟವಧಿ ಮುಷ್ಕರ ನಡೆಸಿದರು.

ನಗರದ ನಗರಸಭೆ ಮುಂದೆ ದಿನ ನಿತ್ಯದ ಸ್ವಚ್ಚತಾ ಕಾರ್ಯವನ್ನು ಬದಿಗೊತ್ತಿ ತಮ್ಮ ಹಕ್ಕಿಗಾಗಿ ಹೋರಾಟ ನಡೆಸಿದರು. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುವ ಪೌರಕಾರ್ಮಿಕರನ್ನು ಖಾಯಂ ಮಾಡಲು ಮುಂದಾಗಿರುವ ಸರಕಾರ ಪೌರಕಾರ್ಮಿಕರೊಟ್ಟಿಗೆ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುವ ವಾಹನ ಚಾಲಕರು, ನೀರುಸರಬರಾಜು ಸಹಾಯಕರು ಲೋಡರ್ಸ್ ಕ್ಲೀನರ್ಸ್ ಹೆಲ್ಲರ್ಸ್ಗಳು ಡಾಟ ಆಪರೇಟರುಗಳು ಸ್ಯಾನಿಟರಿ ಸೂಪರ್ ವೈಸರುಗಳು ಸೇರಿದಂತೆ 15ಸಾವಿರಕ್ಕು ಹೆಚ್ಚು ನೌಕರರನ್ನು ಗುತ್ತಿಗೆಯಲ್ಲಿ ಉಳಿಸಿ ತಾರತಮ್ಯ ಎಸಗಿದ್ದು ಹೊರಗುತ್ತಿಗೆ ನೌಕರರ ನೇರಪಾವತಿ ಹಾಗೂ ಖಾಯಂಗಾಗಿ ಫೆ.1ರಿಂದ ರಾಜ್ಯಾದ್ಯಂತ ಕುಡಿಯುವ ನೀರು ಹಾಗೂ ಸ್ವಚ್ಚತೆ ಸ್ಥಗಿತಗೊಳಿಸಿ ಅನಿರ್ದಿಷ್ಟವಧಿ ಧರಣಿ ನಡೆಸಲಾಗುವುದು ಎಂದು ತಾಲೂಕು ಅಧ್ಯಕ್ಷ ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದರು.

ಇನ್ನೂ ಸ್ಥಳೀಯ ಶಾಸಕ ಟಿ.ರಘುಮೂರ್ತಿ ಪ್ರತಿಭನಾ ಸ್ಥಳಕ್ಕೆ ಆಗಮಿಸಿ ಪೌರಕಾರ್ಮಿಕರ ಅಳಲು ಕೇಳುತ್ತಾ ಮನವಿ ಸ್ವೀಕರಿಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯಸರಕಾರಕ್ಕೆ ಒತ್ತಡ ತರುತ್ತೆನೆ ಎಂದು ಭರವಸೆ ನೀಡಿದರು.
ಇನ್ನೂ ಉಪಾಧ್ಯಕ್ಷ ಪೆನ್ನೆಶ್ ಮಾತನಾಡಿ, ನಗರಗಳ ಸ್ವಚ್ಛತೆ ಹಾಗೂ ಕುಡಿಯುವ ನೀರು ನಿರ್ವಹಣೆಯಲ್ಲಿ ಹೊರಗುತ್ತಿಗೆ ನೌಕರರ ಪಾತ್ರ ಮಹತ್ವದ್ದಾಗಿದೆ. 2017ರಲ್ಲಿ ಪೌರಕಾರ್ಮಿಕರ ನೇಮಕಾತಿಗೊಳಿಸಿದಾಗಲೂ ಹೊರಗುತ್ತಿಗೆ ನೌಕರರನ್ನು ಗುತ್ತಿಗೆಯಲ್ಲಿ ಉಳಿಸಲಾಯಿತು. ಈಗಲೂ ಸಹ ಹೊರಗುತ್ತಿಗೆ ನೌಕರರನ್ನು ಗುತ್ತಿಗೆಯಲ್ಲಿ ಮುಂದುವರಿಸುವ ಸರಕಾರದ ನೀತಿ ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಎಂಬAತಾಗಿದೆ ಎಂದರು.

ಇದೇ ಸಂಧರ್ಭದಲ್ಲಿ ಮಂಜುನಾಥ್, ತಿಪ್ಪೆಸ್ವಾಮಿ, ದಿವಾಕರ್, ಮಂಜುನಾಥ್, ನಾಗರಾಜ್, ದುರುಗೇಶ್, ಸತೀಶ್, ಹನುಮಂತರಾಯ್ ಇತರರು ಪಾಲ್ಗೋಂಡಿದ್ದರು.

About The Author

Namma Challakere Local News
error: Content is protected !!