ಚಳ್ಳಕೆರೆ : ಮಧ್ಯ ಕರ್ನಾಟಕದ ಪ್ರಸಿದ್ಧ ಜಾತ್ರೆಗಳಲ್ಲಿ ಒಂದಾದ ಶ್ರೀಗುರುತಿಪ್ಪೇರುದ್ರಸ್ವಾಮಿ ಮಾರ್ಚ್ 10 ನಡೆಯುವ ದೊಡ್ಡ ರಥೋತ್ಸವಕ್ಕೆ ನಡೆಯಲಿದೆ ಎಂದು ಸಚಿವರಾದ ಬಿ.ಶ್ರೀರಾಮುಲು ಹೇಳಿದರು.
ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಗ್ರಾಮದ ಶ್ರೀಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನದ ಒಳಮಠದ ಸಮುದಾಯ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ 2023ನೇ ಸಾಲಿನ ದೊಡ್ಡ ರಥೋತ್ಸವದ ಜಾತ್ರಾ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.
ಶ್ರೀಗುರುತಿಪ್ಪೇರುದ್ರಸ್ವಾಮಿ ಮಹೋತ್ಸವವು ಮಾರ್ಚ್ 03 ರಿಂದ 13 ರವರೆಗೆ ನಡೆಯಲಿದ್ದು, ದೊಡ್ಡ ರಥೋತ್ಸವವು ಮಾರ್ಚ್ 10 ರಂದು ನಿಗಧಿಯಾಗಿದೆ. ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಮೂಲಸೌಲಭ್ಯಗಳ ಕೊರತೆ ಎದುರಾಗಬಾರದು. ಕುಡಿಯುವ ನೀರು, ರಸ್ತೆ, ಆರೋಗ್ಯ, ನೈರ್ಮಲ್ಯ ಸೇರಿದಂತೆ ಯಾವುದೇ ತೊಂದರೆಯಾಗದAತೆ ಎಚ್ಚರಿಕೆಯಿಂದ ವಿವಿಧ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ.ಆರ್.ಜೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಾತ್ರಾ ಮಹೋತ್ಸವಕ್ಕೆ 3 ರಿಂದ 4 ಲಕ್ಷ ಭಕ್ತಾದಿಗಳು ಆಗಮಿಸುವ ನಿರೀಕ್ಷೆಯಿದೆ. ಕುಡಿಯುವ ನೀರು, ವಸತಿ, ಸಾರಿಗೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ನೀರಿನ ಅಗತ್ಯತೆಗಾಗಿ 40 ಟ್ಯಾಂರ‍್ಗಳನ್ನು ಒದಗಿಸಬೇಕು, ಕುಡಿಯುವ ನೀರು ಪೂರೈಸುವ ನೀರಿನ ಮೂಲಗಳ ಗುಣಮಟ್ಟದ ಬಗ್ಗೆ ಪರೀಕ್ಷೆ ನಡೆಸಬೇಕು, ಸಂಬAಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದ ಜಿಲ್ಲಾಧಿಕಾರಿಗಳು, ಈ ಬಾರಿಯ ಜಾತ್ರೆಯನ್ನು ಎಲ್ಲರ ಸಹಕಾರ ಹಾಗೂ ಸಮನ್ವಯದಿಂದ ಅದ್ಧೂರಿಯಾಗಿ ವ್ಯವಸ್ಥಿತವಾಗಿ, ಸುಗಮವಾಗಿ ಜಾತ್ರೆ ನಡೆಸೋಣ, ಇದಕ್ಕೆ ತಮ್ಮೆಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.
ಈ ಭಾಗದಲ್ಲಿ ಕಳದ 5 ವರ್ಷಗಳ ಪಟ್ಟಣ ಸಂಕರ್ಪ ಕಲ್ಪಿಸುವ ರಸ್ತೆ ಹಾಗೂ ಸೇತುವೆ ಕಾಮಗಾರಿ ನಡೆಯುತ್ತಿದೆ. ಇದರಿಂದ ಪಟ್ಟಣಕ್ಕೆ ಆಗಮಿಸುವವರಿಗೆ ತೊಂದರೆಯಾಗುತ್ತಿದೆ. ಇಲಾಖೆಯವರು ಪ್ರತಿ ವರ್ಷವೂ ಸಬೂಬು ಹೇಳುತ್ತಾರೆ. ನಮಗೆ ಸಾಕಾಗಿದೆ. ಇಲಾಖೆ ವತಿಯಿಂದ ರಸ್ತೆ ಮಾಡದಿದ್ದರೆ, ನಾವೇ ಚಂದಾ ಎತ್ತಿ ರಸ್ತೆ ನಿರ್ಮಿಸುತ್ತೇವೆ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ವಿರುದ್ಧ ಸಭೆಯಲ್ಲೆ ಸಾರ್ವಜನಿಕರು ಅಕ್ರೋಶ ವ್ಯಕ್ತತಪಡಿಸಿದರು. ಇದಕ್ಕೆ ಸಂಬAಧಿಸಿದAತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿಗಳು, ರಸ್ತೆಯಲ್ಲಿ ಅಪಘಾತವಾದರೆ ಸಂಬAಧಿಸಿದ ಅಧಿಕಾರಿಗಳನ್ನು ಹೊಣೆ ಮಾಡಿ ಪ್ರಕರಣ ದಾಖಲಿಸುವುದಾಗಿ ಎಚ್ಚರಿಸಿದರು. ತಾತ್ಕಾಲಿಕವಾಗಿ ರಸ್ತೆಯನ್ನು ಡಾಂಬರೀಕರಣಗೊಳಿಸಿ ಸರಿಪಡಿಸಿ, ಜಾತ್ರೆ ನಂತರ ಶಾಶ್ವತ ಕಾಮಗಾರಿ ಕೆಲಸ ಶುರು ಮಾಡಿ ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ, ಚಳ್ಳಕೆರೆ ತಹಶೀಲ್ದಾರ್ ರೆಹಮಾನ್ ಪಾಷಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್, ದೇಗುಲ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರಪ್ಪ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರಾದ ಪಟೇಲ್ ಜಿ.ಎಂ.ತಿಪ್ಪೇಸ್ವಾಮಿ ಎಂವೈಟಿ ಸ್ವಾಮಿ ಸಚಿವರ ಆಪ್ತ ಸಹಾಯಕರಾದ ಪಾಪೇಶ್ ನಾಯಕ, ಬಿಜೆಪಿ ಜಿಲ್ಲಾ ಎಸ್ ಟಿ ಮೋರ್ಚಾ ಅಧ್ಯಕ್ಷ ಪಿ ಶಿವಣ್ಣ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಕೆ ಎಂ ಶಿವಸ್ವಾಮಿ, ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಟಿ. ಲೀಲಾವತಿ, ರೂಪ ತಿಪ್ಪೇಸ್ವಾಮಿ ಹಿರೇಹಳ್ಳಿ ಎನ್ ಮಹಾಂತಣ್ಣ, ಪಟ್ಟಣ ಪಂಚಾಯಿತಿ ಸದಸ್ಯರಾದ ಸೈಯದ್ ಅನ್ವರ್, ಜೆ ಆರ್ ರವಿಕುಮಾರ್, ತಿಪ್ಪೇಸ್ವಾಮಿ, ಪತ್ರಕರ್ತರಾದ ಮಾರುತಿ ,ಶ್ರೀಕಾಂತ್, ಬೆಸ್ಕಾಂ ಶಾಖಾಧಿಕಾರಿ ಎನ್ ಬಿ ಬೋರಣ್ಣ ,ಸೇರಿದಂತೆ ಮತ್ತಿತರರು ಇದ್ದರು.

About The Author

Namma Challakere Local News
error: Content is protected !!