ನಾಯಕನಹಟ್ಟಿ : ಯೋಜನಾ ಕಚೇರಿ ವ್ಯಾಪ್ತಿಯ ನಾಯಕನಹಟ್ಟಿ ವಲಯದ ನಾಯಕನಹಟ್ಟಿ ಕಾರ್ಯಕ್ಷೇತ್ರದಲ್ಲಿ ಜ್ಞಾನವಿಕಾಸ ಕಾರ್ಯಕ್ರಮದಾಡಿಯಲ್ಲಿ ಸೃಜನಶೀಲ ಕಾರ್ಯಕ್ರಮ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ 96 ಜನರಿಗೆ ಬಿಪಿ, ಶುಗರ್, ರಕ್ತ ಪರೀಕ್ಷೆ ಮಾಡಲಾಯಿತು. ಹಾಗೂ ಇವರಿಗೆ ಮಾತ್ರೆಗಳನ್ನು ವಿತರಣೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರು ಸಂತೋಷ ಅವರು ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ಸ್ವ ಉದ್ಯೋಗ ಶಿಕ್ಷಣ ಆರೋಗ್ಯದ ಬಗ್ಗೆ ಮಾಹಿತಿ ಇನ್ನು ಹಲವಾರು ಕಾರ್ಯಕ್ರಮಗಳು ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ಇದ್ದು ಇದರ ಸದುಪಯೋಗವನ್ನು ನಮ್ಮ ಕೇಂದ್ರದ ಸದಸ್ಯರು ಹಾಗೂ ಸ್ವಸಹಾಯ ಸಂಘದ ಸದಸ್ಯರು ಪಡೆದುಕೊಳ್ಳಬೇಕಾಗಿ ಮಾಹಿತಿಯನ್ನು ನೀಡಿದರು.
ಶೇಷಾದ್ರಿ ಸೀನಿಯರ್ ಹೆಲ್ತ್ ಇನ್ಸ್ಪೆಕ್ಟಿಂಗ್ ಆಫೀಸರ್ ಇವರು ಪೌಷ್ಟಿಕ ಆಹಾರ ಸೇವನೆ ಮಾಡುವುದು ಹಾಗೂ ಮೊಳಕೆ ಕಟ್ಟಿದ ಕಾಳುಗಳನ್ನು ತಿನ್ನುವುದು ಪ್ರತಿ ದಿನ ವ್ಯಾಯಾಮ ಸಮಯಕ್ಕೆ ಸರಿಯಾಗಿ ಊಟ ಹಾಗೂ ನಿದ್ರೆ ಮಾಡುವುದು.ಟಿವಿ ಅಸ್ತಮಾದ ಬಗ್ಗೆ ಮಾಹಿತಿಯನ್ನು ನೀಡಿದರು
ಸಣ್ಣ ಓಬಣ್ಣ ಸೀನಿಯರ್ ಮೆಡಿಕಲ್ ಆಫೀಸರ್ ಇವರು ಹಸಿ ತರಕಾರಿ ತಿನ್ನುವುದು ಆರೋಗ್ಯಕ್ಕೆ ಉತ್ತಮ ಹಾಗೂ ಸ್ವಚ್ಛತೆಯ ಬಗ್ಗೆ ಮಾಹಿತಿಯನ್ನು ನೀಡಿದರು
ಸುಧಾ ಆಪ್ತ ಸಮಾಲೋಚಕರು ಇವರು ಟಿವಿ ಕಾಯಿಲೆ ಬಗ್ಗೆ ಮಾಹಿತಿಯನ್ನು ನೀಡಿದರು ಕಾರ್ಯಕ್ರಮದಲ್ಲಿ ನಾಯಕನಹಟ್ಟಿ ವ್ಯಾಪ್ತಿಯ ಪತ್ರಕರ್ತರು ಓಬಳೇಶ್ ಜ್ಞಾನವಿಕಾಸ ಸಮನ್ವಯಾಧಿಕಾರಿ ಹೇಮಲತಾ, ಹಾಗೂ ಸೇವಾ ಪ್ರತಿನಿಧಿಗಳು ಸ್ವಸಹಾಯ ಸಂಘದ ಸದಸ್ಯರು ಭಾಗವಹಿಸಿದ್ದರು.