ವಕೀಲರ ಸಂರಕ್ಷಣೆ ಕಾಯಿದೆ ಜಾರಿಗೊಳಿಸುವಂತೆ ಪ್ರತಿಭಟನೆ,
ಬಜೆಟ್ ಅದಿವೇಶನದಲ್ಲಿ ಧ್ವನಿ ಎತ್ತಲು ವಕೀಲರ ಕೂಗು

ಚಳ್ಳಕೆರೆ : ತಾಲೂಕು ಕಛೇರಿಯ ಮುಂದೆ ಪ್ರತಿಭಟನೆ ನಡೆಸಿದ ತಾಲೂಕು ವಕೀಲರು, ವಕೀಲರ ಸಂರಕ್ಷಣಾ ಕಾಯಿದೆಯನ್ನು ಬಜೆಟ್ ಅದಿವೇಶನದಲ್ಲಿ ಜಾರಿಗೆ ಗೊಳಿಸುವಂತೆ ಆಗ್ರಹಿಸಿ ವಕೀಲರ ಸಂಘದವತಿಯಿAದ ಕೆಲ ಕಾಲ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು.
ಕರ್ನಾಟಕ ವಕೀಲರ ಪರಿಷತ್ತು ವತಿಯಿಂದ ರಾಜ್ಯ ಸರಕಾರಕ್ಕೆ ಒಂದು ವರ್ಷದ ಹಿಂದೆ ವಕೀಲರ ಸಂರಕ್ಷಣಾ ಕಾಯ್ದೆಯ ಕರಡು ಪ್ರತಿಯನ್ನು ಸಲ್ಲಿಸಲಾಗಿದೆ ಆದರೆ ಈ ಬಗ್ಗೆ ಸರಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ ಕೂಡಲೆ ಬಜೆಟ್ ಸಭೆಯಲ್ಲಿ ಮಂಡಿಸುವAತೆ ವಕೀಲರು ಸರಕಾರಕ್ಕೆ ಒತ್ತಾಯಿಸಿದರು.
ಈ ಹಿಂದೆ ವಕೀಲರ ಸಂಘವು ಅಧಿವೇಶನದಲ್ಲಿ ಜಾರಿಗೊಳಿಸುವಂತೆ ಬೃಹತ್ ಪ್ರತಿಭಟನೆ ಮಾಡುವ ಮೂಲಕ ಸರಕಾರದ ಗಮನ ಸೆಳೆದರೂ ಯಾವುದೇ ಪರಯೋಜವಾಗಿಲ್ಲ ಎಂದು ಅಕ್ರೋಶ ವ್ಯಕ್ತಪಡಿಸಿ ತಹಶೀಲ್ದಾರ್ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.
ಇನ್ನೂ ಮನವಿ ಸ್ವೀಕರಿಸಿದ ತಹಶೀಲ್ದಾರ್ ರೇಹಾನ್ ಪಾಷಾ ಮಾತನಾಡಿ ಈ ಕೂಡಲೆ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಕಳಿಸಿಕೊಡಲಾಗುವುದು ಎಂದು ವಕೀಲರಿಗೆ ಭರವಸೆ ನೀಡಿದರು.

ಈ ಪ್ರತಿಭಟನೆಯಲ್ಲಿ ವಕೀಲರ ಸಂಘದ ಅಧ್ಯಕ್ಷ ಆನಂದಪ್ಪ, ಉಪಾಧ್ಯಕ್ಷ ರಾಘವೇಂದ್ರ, ಉಪೇಂದ್ರಕುಮಾರ್, ಕಾಂತರಾಜ್, ರುದ್ರಯ್ಯ, ಜಿ.ಟಿ.ನಾಗರಾಜ್, ಕುಮಾರ್, ರುದ್ರೇಶ್, ಸಿದ್ದರಾಜ್, ಪಾಲಯ್ಯ, ಶೇಖರಪ್ಪ, ಮಧುಮತಿ, ಇತರರಿದ್ದರು.

Namma Challakere Local News

You missed

error: Content is protected !!