ಚಳ್ಳಕೆರೆ : ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನ ವತಿಯಿಂದ ಚಳ್ಳಕೆರೆ ಮತ್ತು ಮೊಳಕಾಲ್ಮುರು ತಾಲ್ಲೂಕುಗಳಲ್ಲಿನ ಆದರ್ಶ ವಿದ್ಯಾಲಯ 6 ನೇ ತರಗತಿಗೆ ದಾಖಲಾಗಲು ಪ್ರವೇಶ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಇದೇ ಫೆಬ್ರವರಿ 18 ರಿಂದ ಮಾರ್ಚ್ 4 ವರಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್ ತಿಳಿಸಿದ್ದಾರೆ.
ಸರಕಾರದಿಂದ ನಡೆಸುವ ಈ ಪರೀಕ್ಷೆಗೆ ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಆನ್‌ಲೈನ್ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಲ್ಲದೆ ಈ 2 ತಾಲ್ಲೂಕುಗಳ ಖಾಯಂ ನಿವಾಸಿಗಳ ಮಕ್ಕಳು ಬೇರೆ ತಾಲ್ಲೂಕು, ಜಿಲ್ಲೆ, ರಾಜ್ಯಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರೂ ಸಹ 6ನೇ ತರಗತಿಯಿಂದ ಮೂಲ ತಾಲೂಕಿನಲ್ಲಿ ವ್ಯಾಸಂಗ ಮಾಡಲು ಇಚ್ಚಿಸಿದಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಡಿಡಿಪಿಐ (ಆಡಳಿತ), ಅಭಿವೃದ್ಧಿ, ಬಿ.ಇ.ಓ, ಬಿ.ಆರ್.ಸಿ. ಚಳ್ಳಕೆರೆ, ಮತ್ತು ಮೊಳಕಾಲ್ಮೂರು ತಾಲ್ಲೂಕು, ಮುಖ್ಯ ಶಿಕ್ಷಕರು, ಆದರ್ಶ ವಿದ್ಯಾಲಯ ಚಳ್ಳಕೆರೆ, ಮೊಳಕಾಲ್ಮೂರು ತಾಲ್ಲೂಕು ಇವರನ್ನು ಸಂಪರ್ಕಿಸಬೇಕು ಎಂದು ಡಯಟ್ ಉಪನಿರ್ದೇಶಕ ಎಂ.ನಾಸಿರುದ್ದೀನ್ ತಿಳಿಸಿದ್ದಾರೆ.

About The Author

Namma Challakere Local News
error: Content is protected !!