ಯುವಕರು ಮಾನಸಿಕವಾಗಿ ದೈಹಿಕವಾಗಿ ಸದೃಢರಾಗಲು ಕ್ರೀಡೆ ಮುಖ್ಯ : ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿ ಎಂ.ವಿಜಯ ನಾಯಕ ಅಭಿಪ್ರಾಯ

ನಾಯಕನಹಟ್ಟಿ:: ಯುವಕರು ಮಾನಸಿಕವಾಗಿ ದೈಹಿಕವಾಗಿ ಸದೃಢರಾಗಲು ಕ್ರೀಡೆ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಹೊತ್ತನ್ನು ನೀಡುವಂತೆ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿ ಎಂ ವಿಜಯ್ ನಾಯಕ ಹೇಳಿದ್ದಾರೆ.
ಸಮೀಪದ ಎನ್ ಮಹದೇವಪುರ ಗ್ರಾಮದಲ್ಲಿ ದಿವಂಗತ ಪಟೇಲ್ ಪಾಪ ನಾಯಕ ಹಾಗೂ ಸುಮನ್ (ಅರ್ಯ ) ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ್ದಾರೆ. ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರವು ಬಹಳ ಹಿಂದುಳಿದ ಪ್ರದೇಶ ಈ ಭಾಗದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಣದ ಕೊರತೆ ಹೆಚ್ಚು ಕಾಡುತ್ತಿದೆ ಮೊದಲು ಮಕ್ಕಳಿಗೆ ಶಿಕ್ಷಣ ಕೊಡಿ ಶಿಕ್ಷಣದಿಂದ ಮಾತ್ರ ಅಭಿವೃದ್ಧಿಯಾಗಲು ಸಾಧ್ಯ ಈ ಭಾಗದ ಪೋಷಕರು ತಮ್ಮ ಮಕ್ಕಳಿಗೆ ಒಂದು ಹೊತ್ತಿನ ಊಟವಿಲ್ಲದಿದ್ದರೂ ಪರವಾಗಿಲ್ಲ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ವಿದ್ಯಾವಂತರನ್ನಾಗಿ ಮಾಡಿ ಅದೇ ರೀತಿ ಎನ್ ಮಹದೇವಪುರ ಗ್ರಾಮದ ಯುವ ನಾಯಕ ಸುಮನ್ ಉತ್ತಮ ಕ್ರಿಕೆಟ್ ಆಟಗಾರ ಕ್ರೀಡೆ ಬಗ್ಗೆ ಮತ್ತು ಜನಸಾಮಾನ್ಯರ ಬಗ್ಗೆ ಹೆಚ್ಚು ಕಾಳಜಿ ಉಳ್ಳ ವ್ಯಕ್ತಿ ಆದಷ್ಟು ಬೇಗ ಸುಮನ್ ನಮ್ಮನ್ನು ಬಿಟ್ಟು ಅಗಲಿರುವುದು ತುಂಬಾ ನೋವಿನ ಸಂಗತಿ ಅದರಿಂದ ಈ ಗ್ರಾಮದ ಪ್ರತಿಯೊಬ್ಬ ಯುವಕರು ಹಾಗೂ ಕ್ರೀಡಾಪಟುಗಳು ಕ್ರೀಡೆ ಬಗ್ಗೆ ಹೆಚ್ಚಿನ ಹೊಲವನ್ನು ನೀಡಿ ಮತ್ತು ಆರೋಗ್ಯದ ಕಡೆ ಗಮನಹರಿಸುವಂತೆ ಗ್ರಾಮಸ್ಥರಿಗೆ ಕಿವಿಮಾತು ಹೇಳಿದರು.

ಇದೆ ವೇಳೆ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಪಟೇಲ್ ಜಿ ತಿಪ್ಪೇಸ್ವಾಮಿ ಮಾತನಾಡಿ ಕ್ರೀಡೆ ಎಂಬುದು ನಮ್ಮ ಜೀವನದ ಒಂದು ಭಾಗವಾಗಿದೆ ಇದು ದೈಹಿಕವಾಗಿ ಮತ್ತು ಮಾನಸಿಕವಾಗಿ ಅಭಿವೃದ್ಧಿಯ ಮೂಲವಾಗಿದೆ ಕ್ರೀಡೆಗೆ ಹೆಚ್ಚಿನ ಒಲವು ತೋರಬೇಕು ನಮ್ಮ ದೇಹವನ್ನು ಶಕ್ತಿಯುತಗೊಳಿಸಲು ಕ್ರೀಡೆ ಸಹಕಾರಿಯಾಗಿದೆ ಇತ್ತೀಚಿನ ದಿನಗಳಲ್ಲಿ ಕ್ರೀಡೆಗಳು ಗ್ರಾಮೀಣ ಪ್ರದೇಶದಲ್ಲಿ ಕಣ್ಮರೆಯಾಗಿವೆ ಯುವ ಪೀಳಿಗೆ ಗ್ರಾಮೀಣ ಪ್ರದೇಶದ ನಡೆಯುವಂತಹ ಕಬಡ್ಡಿ ಕೊಕ್ಕೋ ಕ್ರಿಕೆಟ್ ಕ್ರೀಡೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಜಿ ತಿಪ್ಪೇಸ್ವಾಮಿ ತಿಳಿಸಿದರು.

Namma Challakere Local News

You missed

error: Content is protected !!