ಚಳ್ಳಕೆರೆ : ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು, ಸ್ವಚ್ಚತೆ ಈಗೇ ಯಾವುದೇ ಸಮಸ್ಯೆಗಳಿದ್ದರೆ ನಮ್ಮ ಗಮನಕ್ಕೆ ತನ್ನಿ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ಅವರು ತಾಲೂಕಿನ ನನ್ನಿವಾಳ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದ ಮುಖಂಡರ ಮತ್ತು ಕಾರ್ಯಕರ್ತರ ಕುಂದು ಕೊರತೆಗಳ ಸಭೆಯಲ್ಲಿ ಪಾಲ್ಗೊಂಡು ಸೂಕ್ತ ರೀತಿಯ ಪರಿಹಾರವನ್ನು ನೀಡುವಂತೆ ಬರವಸೆ ನೀಡಿದರು.
ಇನ್ನೂ ಗ್ರಾಮದ ಸರ್ವತೋಮುಖ ಅಭಿವೃದ್ದಿಗೆ ಎಲ್ಲಾ ಹಂತದ ಅಧಿಕಾರಿಗಳು ಸನ್ನದರಾಗಬೇಕು, ಅದೇ ರೀತಿಯಲ್ಲಿ ಗ್ರಾಮದಲ್ಲಿ ಈಗಾಗಲೇ ರೈತರ ಬೆಳೆ ಹಾನಿ ಪರಿಹಾರ, ಪಿಂಚಣಿ, ಈಗೇ ಹಲವು ಸಮಸ್ಯೆಗಳನ್ನು ಸ್ಥಳದಲ್ಲಿ ಪರಿಹಾರಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ವೀರಭದ್ರಯ್ಯ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪ್ರಕಾಶ್‌ಮೂರ್ತಿ, ಗ್ರಾಪಂ. ಅಧ್ಯಕ್ಷ ಬಸವರಾಜ್, ಸದಸ್ಯ ರಾಜಣ್ಣ, ಮುಖಂಡರುಗಳಾದ ಮಹೇಶ್, ತಿಪ್ಪೇಸ್ವಾಮಿ, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.