ನಾಯಕನಹಟ್ಟಿ : ಪಟ್ಟಣದ ಗುರುತಿಪ್ಪೇರುದ್ರಸ್ವಾಮಿ ಹೊರಮಠ ದೇವಾಲಯದ ಆವರಣದಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮುಖಂಡ ಡಾ.ಬಿ.ಯೋಗೀಶ್‌ಬಾಬು ಅವರು ಮಾತನಾಡಿ. ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಪಕ್ಷಾಂತರ ಬೆಳವಣಿಗೆಯಿಂದ ಕಾಂಗ್ರೆಸ್‌ಪಕ್ಷದ ಯಾವ ಕಾರ್ಯಕರ್ತರು ಸಹ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು.
ಮೊಳಕಾಲ್ಮುರು ಕ್ಷೇತ್ರದಲ್ಲಿ ಎರಡು ದಿನಗಳ ಹಿಂದೆ ನಡೆದ ಪಕ್ಷಾಂತರ ಚಟುವಟಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ. ಪಕ್ಷದ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಮತ್ತು ಸಿಎಲ್‌ಪಿ ನಾಯಕರಾದ ಸಿದ್ಧರಾಮಯ್ಯನವರು ಸೇರಿದಂತೆ ಕೆಪಿಸಿಸಿ ರಾಜ್ಯ ಪದಾಧಿಕಾರಿಗಳು ಪಕ್ಷ ಸಂಘಟನೆಗೆ ಆಧ್ಯತೆ ನೀಡಿ ಎಂದು ಸ್ಪಷ್ಟಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವ ಕಾರ್ಯಕರ್ತರೂ ಸಹ ಆತಂಕಪಡುವ ಅಗತ್ಯವಿಲ್ಲ. ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರಕ್ಕೆ ಈ ಹಿಂದೆ ನಡೆದ ಎಲ್ಲ ಸಾರ್ವತ್ರಿಕ ಚುನಾವಣೆಗಳಲ್ಲಿ ಅತಿಹೆಚ್ಚು ಬಾರಿ ಕಾಂಗ್ರೆಸ್ ಪಕ್ಷ ಗೆದ್ದಿದೆ. ಮೊಳಕಾಲ್ಮುರು ಕ್ಷೇತ್ರವು ಕಾಂಗ್ರೆಸ್‌ಪಕ್ಷದ ಭದ್ರಕೋಟೆಯಾಗಿದ್ದು, ಪ್ರತಿಯೊಂದು ಬೂತ್‌ಮಟ್ಟದಲ್ಲೂ ಅಪಾರ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿದ್ದಾರೆ.
ಎಲ್ಲರೂ ಸೇರಿ ಪಕ್ಷವನ್ನು ಸಂಘಟಿಸಬೇಕಿದೆ. ಹಿಂದೆ ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಮಾಜಿ ಮುಖ್ಯಂತ್ರಿಗಳಾದ ಸಿದ್ದರಾಮಯ್ಯನವರು ನೀಡಿದ 165 ಭಾಗ್ಯಯೋಜನೆಗಳು ಇನ್ನೂ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿವೆ. ಹಾಗೂ ಮುಂದಿನ ದಿನಗಳಲ್ಲಿ ಮತದಾರರು ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಅಧಿಕಾರಕ್ಕೆ ತಂದರೆ ರಾಜ್ಯದ ಪ್ರತಿ ಮಹಿಳೆಗೆ ರೂ.2ಸಾವಿರ ನಗದು ನೀಡುವ ಗೃಹಲಕ್ಷಿö್ಮ ಯೋಜನೆ, ಪ್ರತಿಮನೆಗೂ 200 ಯೂನಿಟ್ ಉಚಿತ ವಿದ್ಯುತ್, ಹಾಗೂ ಪ್ರತಿ ಕುಟುಂಬದ ಸದಸ್ಯರಿಗೆ 10ಕೆಜಿ ಉಚಿತ ಅಕ್ಕಿ ವಿತರಿಸುವ ಖಚಿತ ಯೋಜನೆಗಳನ್ನು ಮನೆಮನೆಗೂ ಅದರಲ್ಲೂ ವಿಶೇಷವಾಗಿ ಮಹಿಳೆಯರಿಗೆ ತಿಳಿಸುವ ಕಾರ್ಯ ಮಾಡಬೇಕಿದೆ. ಈ ಕ್ಷೇತ್ರದಲ್ಲಿ ಅಭಿವೃದ್ಧಿಯ ಪರ್ವ ಆರಂಭವಾಗಿದ್ದೆ ಕಾಂಗ್ರೆಸ್ ಅವದಿಯಲ್ಲಿ. ಹಾಗೇ ಕಳೆದ 5ವರ್ಷಗಳಿಂದ ಕ್ಷೇತ್ರದಲ್ಲಿ ಬಿಜೆಪಿ ಸಾಧನೆ ಶೂನ್ಯವಾಗಿದೆ. ಅಭಿವೃದ್ಧಿಯಲ್ಲಿ ಹಿಂದುಳಿದೆ. ಈ ಸತ್ಯಾಂಶಗಳನ್ನು ಕ್ಷೇತ್ರದ ಜನತೆಗೆ ತಿಳಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕಿದೆ ಎಂದರು.
ಜಿ.ಪA.ಮಾಜಿ ಸದಸ್ಯ ಬಾಲರಾಜ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಇದೇವೇಳೆ ಬ್ಲಾಕ್‌ಕಾಂಗ್ರೆಸ್ ಅಧ್ಯಕ್ಷ ಜಿ.ಪಿ.ನಾಗೇಶ್‌ರೆಡ್ಡಿ, ಪ.ಪಂ.ಸದಸ್ಯರಾದ ಸೈಯದ್‌ಅನ್ವರ್, ಕೆ.ಪಿ.ತಿಪ್ಪೇಸ್ವಾಮಿ, ಮಹೇಶ್ವರಿ, ಮುಖಂಡರಾದ ಶಾಮಸುಂದರರೆಡ್ಡಿ, ಪಾಪನಾಯಕ, ಗೌಡ್ರುತಿಪ್ಪೇಸ್ವಾಮಿ, ಜಾಕೀರ್‌ಹುಸೇನ್, ಅಮೀನುದ್ದೀನ್, ರುದ್ರಮುನಿ, ಕಾಳಪ್ಪ, ಪಾಲಾಕ್ಷಪ್ಪ, ಬಂಗಾರಪ್ಪ ಅವರೂ ಇದ್ದರು.