ಚಳ್ಳಕೆರೆ : ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಈಡೀ ರಾಜ್ಯದಲ್ಲಿ ಮೊದಲ ಹಂತವಾಗಿ ಕಾರ್ಯಗತ ಮಾಡುವ ಯೋಜನೆಗಳನ್ನು ಚುನಾವಣೆ ಮುಂಚಿತವಾಗಿಯೇ ಮತದಾರರಿಗೆ ಗ್ಯಾರಂಟಿ ಕಾರ್ಡ್ ನೀಡುವ ಮೂಲಕ ರಾಜ್ಯದಲ್ಲಿ ಕಾಂಗ್ರೇಸ್ ಅಧಿಕಾರಕ್ಕೆ ತರುವ ಎಲ್ಲಾ ಕಸರತ್ತು ನಡೆಯುತ್ತಿದೆ
ಅದರಂತೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ಪಕ್ಷದ ಹಲವು ಮುಖಂರು ಸೇರಿ ಈಡೀ ಕ್ಷೇತ್ರದಲ್ಲಿ ಮನೆ ಮನೆಗೆ ಬೇಟಿ ನೀಡಿ ಕಾಂಗ್ರೇಸ್ ಪಕ್ಷದ ಗ್ಯಾರಂಟಿ ಕಾರ್ಡ್ ಹಂಚುವ ಮೂಲಕ ಈಡೀ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ.
ಅದರಂತೆ ಮತದಾರರಿಗೆ ಗ್ಯಾರಂಟಿ ಕಾರ್ಡ ಹಂಚಿ ಮಾತನಾಡಿದ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಜೆ.ರಾಘವೇAದ್ರ ಅವರು ಬಿಜೆಪಿ ಸರ್ಕಾರಗಳು ಸಂಪೂರ್ಣವಾಗಿ ಬರೀ ಸುಳ್ಳು ಹೇಳುವ ಮೂಲಕ ಜನರ ದಾರಿಯನ್ನು ತಪ್ಪಿಸುತ್ತಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷ ಮಾತ್ರ ಜನಪರವಾಗಿದ್ದು ಸಂಕಷ್ಟದಲ್ಲಿರುವ ಜನರಿಗೆ ಕೈ ಹಿಡಿಯುವ ಪಕ್ಷವಾಗಿದೆ, ಗೃಹ ಜ್ಯೋತಿ, ಗೃಹ ಲಕ್ಷ್ಮಿ ಅನ್ನಭಾಗ್ಯ ಯೋಜನೆ ನೀಡುವ ಮೂಲಕ ಜನಮಾನಸದಲ್ಲಿ ಉಳಿದಿದ್ದೆವೆ ಎಂದರು.

ಇನ್ನೂ ನಗರದ ಅಂಬೆಡ್ಕರ್ ನಗರದಲ್ಲಿ ಗ್ಯಾರಂಟಿ ಕಾರ್ಡ್ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಬಿಜೆಪಿಯೂ ಬರೀ ಸುಳ್ಳು ಹೇಳುವ ಮೂಲಕ ಜನರ ದಾರಿಯನ್ನು ತಪ್ಪಿಸುತ್ತಿದೆ. ಕಾಂಗ್ರೆಸ್ ಪಕ್ಷವು ಸಂಕಷ್ಟದಲ್ಲಿರುವ ಜನರಿಗೆ ನೆರವಾಗುವ ಉದ್ದೇಶದಿಂದ ಗೃಹಜ್ಯೋತಿ ಯೋಜನೆ ಮೂಲಕ 200 ಯುನಿಟ್ ಉಚಿತ ವಿದ್ಯುತ್, ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ ರೂ. 2000, ಹಾಗೂ ಅನ್ನಭಾಗ್ಯ ಯೋಜನೆಯ ಮೂಲಕ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ನೀಡಲು ಈ ಮೂರು ಐತಿಹಾಸಿಕ ಯೋಜನೆಗಳನ್ನು ಗ್ಯಾರಂಟಿ ಕಾರ್ಡ ಮೂಲಕ ಮತದಾರರಿಗೆ ತಿಳಿಸುವ ಪ್ರಯತ್ನ ಮಾಡಿದೆ ಎಂದರು.

About The Author

Namma Challakere Local News
error: Content is protected !!