ಚಳ್ಳಕೆರೆ : ಕೇಂದ್ರ ಮತ್ತು ರಾಜ್ಯ ಬಿ.ಜೆ.ಪಿ. ಸರ್ಕಾರದ ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆಯನ್ನು ವಿರೋಧಿಸಿ ಮಾ.4ರಂದು ಬೃಹತ್ ಪ್ರತಿಭಟನೆ ಕಾಂಗ್ರೇಸ್ ಪಕ್ಷ ಹಮ್ಮಿಕೊಂಡಿದೆ.
ರಾಜ್ಯದಲ್ಲಿ ಈಗಾಗಲೇ ಬೆಲೆ ಏರಿಕೆಯಿಂದ ಜನ ಜೀವನ ಮಾಡುವುದು ಕಷ್ಟವಾಗಿದೆ ಇತಂಹ ಸಂದ್ಗಿತ ಪರಸ್ಥಿತಿಯಲ್ಲಿ ಮತ್ತೆ ಗಾಯದ ಮೇಲೆ ಬರೆ ಎಳೆದಂತೆ ಮತ್ತೆ 50 ರೂ.ಹೆಚ್ಚಳ ಮಾಡಲು ಹೋರಟಿರುವುದು ಜನ ವೀರೋಧಿ ಆಡಳಿತ ಎಂದು ಕಾಂಗ್ರೇಸ್ ಕಿಡಿ ಕಾರಿದೆ.
ಅದರಂತೆ ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕ ಟಿ.ರಘುಮೂರ್ತಿ ನೇತೃತ್ವದಲ್ಲಿ ಅಪಾರ ಮುಖಂಡರೊAದಿಗೆ ನಗರದ ವಾಲ್ಮೀಕಿ ವೃತ್ತದಿಂದ ಅಂಬೇಡ್ಕರ್ ವೃತ್ತದ ಮೂಲಕ ತಾಲೂಕು ಕಛೇರಿ ಮುಂದೆ ಪ್ರತಿಭಟಿಸಿ ಮನವಿ ನೀಡಲಾಗುವುದು ಎಂದು ಚಳ್ಳಕೆರೆ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕೆ.ವೀರಭದ್ರಯ್ಯ ಹೇಳಿಕೆ ನೀಡಿದ್ದಾರೆ.
ಅದರಂತೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಎಲ್ಲಾ ಮಟ್ಟದ ಪದಾಧಿಕಾರಿಗಳು, ಎಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಮತ್ತು ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಹಾಗೂ ಮಾಜಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರ, ಸದಸ್ಯರುಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಮತ್ತು ಕಾಂಗ್ರೆಸ್ ಪಕ್ಷದ ಎಲ್ಲಾ ಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಪ್ರಕಟಣೆಯಲ್ಲಿ ಕೋರಿದ್ದಾರೆ.