ಚಳ್ಳಕೆರೆ : ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಟಿ.ರಘುಮೂರ್ತಿ ಈಡೀ ಕ್ಷೇತ್ರದಲ್ಲಿ ಭರ್ಜರಿ ರೌಂಡ್ಸ್ ಹೊಡೆಯುತ್ತಿದ್ದಾರೆ.
ಅದರಂತೆ ಕ್ಷೇತ್ರದ ಬಾಲೇನಹಳ್ಳಿ ಗೇಟ್ ಸಮೀಪ ನಡೆದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ವಿಗ್ರಹ ಪ್ರತಿಷ್ಠಾಪನ ಸಮಾರಂಭದಲ್ಲಿ ಪಾಲ್ಗೊಂಡು ದೇವರಿಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ನಂತರ ಸಿದ್ದೇಶ್ವರನ ದುರ್ಗಾದ ಎಸ್ಸಿ ಕಾಲೋನಿಯಲ್ಲಿ ಸಾರ್ವಜನಿಕ ಕುಂದು ಕೊರತೆ ಸಭೆಯನ್ನು ನಡೆಸಿದರು, ಕಾಲೋನಿಯ ಮುಖಂಡರು ಕಾಂಗ್ರೆಸ್ ಪಕ್ಷದ ಸಿದ್ಧಾಂತ ಮತ್ತು ಶಾಸಕರ ಅಭಿವೃದ್ಧಿ ಕಾರ್ಯಗಳಿಗೆ ಮೆಚ್ಚಿಗೆ ವ್ಯಕ್ತಪಡಿಸಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು,
ಇನ್ನೂ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರದಲ್ಲಿ ತೊಡಗಿದ ಕಾಂಗ್ರೇಸ್ ಪಕ್ಷದ ಮುಖಂಡರು ಕಾಂಗ್ರೇಸ್ ಪಕ್ಷ ನೀಡುವ ಗ್ಯಾರಂಟಿ ಕಾರ್ಡ ನೀಡುವ ಕಾರ್ಯಕ್ರದಮಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಟಿ.ರಘುಮೂರ್ತಿ, ಕೇಂದ್ರ ಮತ್ತು ರಾಜ್ಯದಲ್ಲಿ ಆಳ್ವಿಕೆ ನಡೆಸುತ್ತಿರುವ ಬಿಜೆಪಿ ಸರ್ಕಾರಗಳು ಸಂಪೂರ್ಣವಾಗಿ ಬರೀ ಸುಳ್ಳು ಹೇಳುವ ಮೂಲಕ ಜನರ ದಾರಿಯನ್ನು ತಪ್ಪಿಸುತ್ತಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷ ಮಾತ್ರ ಜನಪರವಾಗಿದ್ದು ಸಂಕಷ್ಟದಲ್ಲಿರುವ ಜನರಿಗೆ ಕೈ ಹಿಡಿಯುವ ಪಕ್ಷವಾಗಿದೆ, ಕಾಂಗ್ರೆಸ್ ಪಕ್ಷದ ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಅನ್ನಭಾಗ್ಯ ಕಾರ್ಡ್ ಹೊರತಂದಿದೆ ಇದರಿಂದ ಮುಂಬರುವ ಚುನಾವಣೆಯಲ್ಲಿ ಕಾಂಗ್ರೇಸ್ ಅಧಿಕಾರಕ್ಕೆ ಬರುವುದು ಶತ ಸಿದ್ದ ಎಂದರು.
ಇನ್ನೂ ಬಿಜೆಪಿಯೂ ಬರೀ ಸುಳ್ಳು ಹೇಳುವ ಮೂಲಕ ಜನರ ದಾರಿಯನ್ನು ತಪ್ಪಿಸುತ್ತಿದೆ. ಕಾಂಗ್ರೆಸ್ ಪಕ್ಷವು ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನರಿಗೆ ನೆರವಾಗುವ ಉದ್ದೇಶದಿಂದ ಗೃಹಜ್ಯೋತಿ ಯೋಜನೆ ಮೂಲಕ 200 ಯುನಿಟ್ ಉಚಿತ ವಿದ್ಯುತ್, ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ ರೂ. 2000, ಹಾಗೂ ಅನ್ನಭಾಗ್ಯ ಯೋಜನೆಯ ಮೂಲಕ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಿ ಈ ಮೂರು ಐತಿಹಾಸಿಕ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ ಎಂದರು.