ಶ್ರೀ ತಿಪ್ಪೇರುದ್ರಸ್ವಾಮಿ ಜಾತ್ರೆಯ ವಿಶೇಷಗಳಲ್ಲಿ ಒಂದಾಗಿರುವ ಮುಕ್ತಿ ಬಾವುಟದ ಹರಾಜು ಪ್ರಕ್ರಿಯೆಯಲ್ಲಿ ಹಲವರು ಭಾಗಿಯಾಗಿದ್ದರು.
ಅಂತಿಮವಾಗಿ ಹಿರಿಯೂರು ಮಾಜಿ ಶಾಸಕ ಡಿ ಸುಧಾಕರ್ 55 ಲಕ್ಷ ರೂಪಾಯಿಗೆ ಮುಕ್ತಿ ಬಾವುಟವನ್ನು ಹರಾಜು ಪ್ರಕ್ರಿಯೆಯಲ್ಲಿ ತಮ್ಮದಾಗಿಸಿಕೊಂಡರು.
ನಂತರ ದೊಡ್ಡ ರಥಕ್ಕೆ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಮುಕ್ತಿ ಬಾವುಟ ಹರಾಜು ಪ್ರಕ್ರಿಯೆಯಲ್ಲಿ ಸಾಥ್ ನೀಡಿದ ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಜೊತೆಯಲ್ಲಿ ರಥೋತ್ಸವಕ್ಕೆ ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು.
ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ಭಕ್ತ ಸಾಗರದ ದಂಡು ಹರಿದು ಬಂದಿತ್ತು. ಅಕ್ಕಪಕ್ಕದ ಆಂಧ್ರಪ್ರದೇಶ, ತೆಲಂಗಾಣ, ಸೇರಿ ಬಳ್ಳಾರಿ, ರಾಯಚೂರು, ತುಮಕೂರು, ಕೊಪ್ಪಳ ಗದಗ ಸೇರಿ ಮತ್ತಿತರರ ಭಾಗಗಳಿಂದ ಭಕ್ತರು ತಿಪ್ಪೇಶನ ಜಾತ್ರೆಯಲ್ಲಿ ಭಾಗವಹಿಸಿ ಸ್ವಾಮಿಯ ದರ್ಶನ ಪಡೆದರು.

