ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ ರಘುಮೂರ್ತಿ ಈಡೀ ಕ್ಷೇತ್ರದಲ್ಲಿ ಬಿಡುವಿಲ್ಲದೆ ಓಡಾಡಟ ನಡೆಸುತ್ತಿದ್ದಾರೆ,
ಅದರಂತೆ ಗ್ರಾಮಗಳಲ್ಲಿ ಕುಂದು ಕೊರತೆ ಸಭೆ, ಪಕ್ಷ ಸೆರ್ಪಡೆ ಖಾಸಗಿ ಕಾರ್ಯಕ್ರಮ ಈಗೇ ಹಲವು ಕಾರ್ಯಕ್ರಮಗಳ ಮೂಲಕ ಈಡೀ ಕ್ಷೇತ್ರದಲ್ಲಿ ಭರ್ಜರಿ ರೌಂಡ್ಸ್ ಒಡೆಯುತ್ತಿದ್ದಾರೆ.
ಅದಂರತೆ ಚಳ್ಳಕೆರೆ ತಾಲೂಕಿನ ನಾಗಗೊಂಡನಹಳ್ಳಿ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಸಮುದಾಯ ಭವನದಲ್ಲಿ ನಡೆದ ಕಾಮಸಮುದ್ರ ಗ್ರಾಮದ ಮುಖಂಡರಾದ ಅಂಜನಮೂರ್ತಿರವರ ಸಂಬAದಿಕರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಧು ವರರಿಗೆ ಶುಭ ಕೋರಿದರು.
ನಂತರ ತಾಲ್ಲೂಕಿನ ಉಪ್ಪಾರಹಟ್ಟಿ ಗ್ರಾಮದ ಶಿರಿಗೊಂಡಪ್ಪ ಇವರ ತೋಟದ ಮನೆಯಲ್ಲಿ ಕಾಂಗ್ರೇಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಪಕ್ಷ ಸೆರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷರು ಹಾಗೂ ಗೊಲ್ಲ ಸಮುದಾಯದ ಮುಖಂಡರು ಹಾಗೂ ಗೋಕುಲ ಪತ್ತಿನ ಸಹಕಾರ ಸಂಘದ ಸಂಸ್ಥಾಪಕರಾದ ಬಿ.ವಿ.ಸಿರಿಯಣ್ಣ ರವರನ್ನು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು, ನಂತರ ಭರಮಸಾಗರ ಗ್ರಾಮದಲ್ಲಿ ನಡೆದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ನಂತರ ಚಳ್ಳಕೆರೆ ತಾಲೂಕಿನ ಭರಮಸಾಗರ, ಬೊಮ್ಮಸಮುದ್ರ ಗ್ರಾಮದಲ್ಲಿ ನಡೆದ ಮುಖಂಡರ ಮತ್ತು ಕಾರ್ಯಕರ್ತರ ಕುಂದು ಕೊರತೆಗಳ ಸಭೆಯಲ್ಲಿ ಪಾಲ್ಗೊಂಡು ಪರಿಹಾರ ಕಲ್ಪಿಸುವಂತೆ ಭರವಸೆ ನೀಡಿದರು.