ಚಳ್ಳಕೆರೆ : ಸಾರ್ವಜನಿಕರ ಸೇವೆಗೆ ಸರಕಾರ ಗ್ರಾಮ ವಾಸ್ತವ್ಯ ಎಂಬ ವಿನೂತನ ಕಲ್ಪನೆಯ ಮೂಲಕ ಸಾರ್ವಜನಿಕರ ಮನೆ ಬಾಗಿಲಿಗೆ ಯೋಜನೆ ತಲುಪಿಸುವುದಾಗಿದೆ ಎಂದು ತಹಶೀಲ್ದಾರ್ ರೇಹಾನ್ ಪಾಷಾಕಿವಿಮಾತು ಹೇಳಿದರು.

ಅವರು ತಾಲೂಕಿನ ಸೋಮಗುದ್ದು ಗ್ರಾಪಂ ಕೇಂದ್ರ ಶ್ರೀಸೋಮೇಶ್ವರ ದೇವಸ್ಥಾನದ ಆವರಣದಲ್ಲಿ ತಾಲೂಕು ಆಡಳಿತವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸರಕಾರದ ಮಹತ್ವದ ಈ ಯೋಜನೆ ಪ್ರತಿ ತಿಂಗಳು ನಾಲ್ಕೇನೆ ಶನಿವಾರ ಗ್ರಾಪಂ ವ್ಯಾಪ್ತಿಯಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ರೈತರ ಪಹಣಿ, ಪಿಂಚಣಿ, ರಸ್ತೆ, ಪೋಡಿ ಸೇರಿದಂತೆ ವಿವಿಧ ಇಲಾಖೆಯ ಸೌಲಭ್ಯಗಳನ್ನು ಪಡೆಯಲು ಇಂತಹ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗ ಪಡಿಸಿಕೊಂಡು ಸಣ್ಣ ಪುಟ್ಟ ಕೆಲಸಗಳಿಗೆ ನಗರದ ಕಚೇರಿಗಳಿಗೆ ಅಲೆದಾಡುವುದುನ್ನು ತಪ್ಪಿಸಬೇಕು ಎಂದು ತಿಳಿಸಿದರು.
ತೋಟಗಾರಿಕೆ ಅಧಿಕಾರಿ ಆರ್.ವಿರುಪಾಕ್ಷಪ್ಪ ಮಾತನಾಡಿ ಗ್ರಾಮೀಣ ಜನರು ಸರಕಾರಿ ಸೌಲಭ್ಯಗಳನ್ನು ಪಡೆಯಲು ನಗರದ ಸರಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ತಾಲೂಕು ಆಡಳೀತವೇ ನಿಮ್ಮ ಗ್ರಾಮಕ್ಕೆ ಬಂದಿದ್ದು ನಿಮ್ಮ ಸಮ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಲಾಗುವುದು ಈ ಸಭೆಯನ್ನು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಕೃಷಿ ಸಹಾಯಕ ನಿರ್ದೇಶಕ ಅಶೋಕ್, ಪಶು ಸಹಾಯಕ ನಿರ್ದೇಶದಕ ಡಾ.ರೇವಣ್ಣ, ತೋಟಗಾರಿಗೆ ಹಿರಿಯ ನಿರ್ದೇಶಕ ಡಾ.ವಿರುಪಾಕ್ಷಪ್ಪ ಸೇರಿಂದ ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖೆಗಳ ಮಾಹಿತಿ ನೀಡಿದರು.
ಗ್ರಾಪಂ ಅಧ್ಯಕ್ಷೆ, ಉಪಾಧ್ಯಕ್ಷೆ. ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!