ಚಳ್ಳಕೆರೆ : ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬAಧ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಸಹಾಯವಾಣಿ ಕೇಂದ್ರ ಸ್ಥಾಪಿಸಿ, ಅಧಿಕಾರಿ, ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಸಹಾಯವಾಣಿ ಕೇಂದ್ರ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ. ಸಹಾಯವಾಣಿ ಸಂಖ್ಯೆ 08194-222416 ಆಗಿರುತ್ತದೆ.
ಸಹಾಯವಾಣಿ ಕೇಂದ್ರದ ಸಿಬ್ಬಂದಿಯು ಸೂಚಿಸಿರುವ ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಿ, ಸಹಾಯವಾಣಿಗೆ ಬರುವ ಮಾಹಿತಿ, ದೂರುಗಳನ್ನು ದೂರುವಹಿಯಲ್ಲಿ ನಮೂದಿಸಿ, ತಕ್ಷಣವೇ ಮೇಲ್ವಿಚಾರಕರಿಗೆ ಹಾಗೂ ಸಂಬAಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಸೂಚಿಸಿದೆ. ನೌಕರ ಸಿಬ್ಬಂದಿ ವರ್ಗ ಚುನಾವಣಾ ಕೆಲಸಗಳನ್ನು ಜವಾಬ್ದಾರಿಯುತವಾಗಿ ಚಾಚು ತಪ್ಪೇದೆ ನಿರ್ವಹಿಸಬೇಕು.
ಚುನಾವಣಾ ಕರ್ತವ್ಯದಲ್ಲಿ ಲೋಪದೋಷಗಳು ಕಂಡುಬAದಲ್ಲಿ ಪ್ರಜಾಪ್ರಾತಿನಿಧ್ಯ ಕಾಯ್ದೆಯನ್ವಯ ನಿರ್ಧಾಕ್ಷಣ್ಯವಾಗಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಹಾಗೂ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಚಿತ್ರದುರ್ಗ ತಹಶೀಲ್ದಾರ್ ಡಾ.ನಾಗವೇಣಿ ತಿಳಿಸಿದ್ದಾರೆ.