ಚಳ್ಳಕೆರೆ : ಚುನಾವಣೆಗೆ ಸಂಬAಧಿಸಿದAತೆ ಯಾವುದೇ ಕರಪತ್ರ, ಪೋಸ್ಟರ್, ಬ್ಯಾನರ್ ಇತ್ಯಾದಿಗಳನ್ನು ಮುದ್ರಿಸಿದ ಸಂದರ್ಭದಲ್ಲಿ ಕಡ್ಡಾಯವಾಗಿ ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಒದಗಿಸುವುದು ಕಡ್ಡಾಯವಾಗಿದೆ ಎಂದು ಚುನಾವಣಾಧಿಕಾರಿ ಆನಂದ್ ಹೇಳಿದರು.
ನಗರದ ತಾಲೂಕು ಕಚೇರಿ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಿಂಟಿAಗ್ ಪ್ರೆಸ್ ಮಾಲಿಕರಿಗೆ ಆಯೋಜಿಸಿದ್ದ ಸಭೆಯಲ್ಲಿ ಮಾಹಿತಿ ನೀಡಿದರು. ಚುನಾವಣೆ ಪ್ರಚಾರದ ವೇಳೆ ಅಭ್ಯರ್ಥಿಗಳು ತಪ್ಪು ಮಾಹಿತಿ ನೀಡಿ ಗೆದ್ದರೂ ತಪ್ಪು ಮಾಹಿತಿ ಸಾಬೀತು ಆದರೆ ಅವರ ಶಾಸಕ ಸ್ಥಾನಕ್ಕೆ ಕುತ್ತು ಬರುತ್ತದೆ ಆದ್ದರಿಂದ ಕರ ಪತ್ರ ಮುದ್ರಿಸುವ ಪ್ರತಿಗಳ ಲೆಕ್ಕಾ ಪ್ರತಿದಿನ ಮುದ್ರಣದ ಮಾಹಿತಿಯನ್ನು ಚುನಾವಣೆ ಕಚೇರಿಗೆ ಒದಗಿಸಬೇಕು. ಮುದ್ರಣದ ಬಳಿಕ ಅದರ ಪ್ರತಿಯನ್ನು ನಿಗದಿತ ಮಾಹಿತಿಯೊಂದಿಗೆ ಸಲ್ಲಿಸಬೇಕು. ರಾಜಕೀಯ ಪ್ರೇರಿತ ಯಾವುದೇ ಮುದ್ರಣ ಕಾರ್ಯವನ್ನು ಕೈಗೊಳ್ಳುವ ಸಂದರ್ಭದಲ್ಲಿ ನಿಗದಿತ ಮಾರ್ಗಸೂಚಿಯನ್ನು ತಪ್ಪದೇ ಪಾಲಿಸಬೇಕು.
ಕರಪತ್ರ ಬ್ಯಾನರ್ ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಮುದ್ರಿಸಿ ಚುನಾವಣೆ ಶಾಖೆಗೆ ಮಾಹಿತಿ ನೀಡಿದಾಗ ಒಂದುವೇಳೆ ಚುನಾವಣೆ ಅಧಿಕಾರಿಳು ತಪಾಸಣೆ ವೇಳೆ ಮುದ್ರಿಸಿದ ಸಂಖ್ಯೆಗಿAತ ಹೆಚ್ಚಿನ ಸಂಖ್ಯೆಲ್ಲಿ ಸಿಕ್ಕಾಗ ಮುದ್ರಣ ಮಾಲಿಕ ಮೇಲೆ ಪ್ರಕರಣದಾಖಲಿಸಲಾಗುವುದು ಎಂದು ತಿಳಿಸಿದರು.
ಮುದ್ರಣದ ಮಾಹಿತಿಯನ್ನು ನಿಗಧಿತ ನಮೂನೆಯಲ್ಲಿ ನಮೂದಿಸಬೇಕು. ಇದರಲ್ಲಿ ಮುದ್ರಕರ ಹೆಸರು, ಅಭ್ಯರ್ಥಿ ವಿವರ, ವೆಚ್ಚ, ವಿಳಾಸ, ಪ್ರತಿಗಳ ಸಂಖ್ಯೆ ಇತ್ಯಾದಿ ವಿವರಗಳು ಇರಬೇಕು. ಸಮರ್ಪಕ ಮಾಹಿತಿ ಲಭ್ಯವಿಲ್ಲದಿದ್ದರೆ ಮುದ್ರಕರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಚುನಾವಣೆ ಬಹಿಷ್ಕಾರದಂತಹ ಪೋಸ್ಟರ್, ಕರಪತ್ರ, ಬ್ಯಾನರ್‌ಗಳನ್ನು ಮುದ್ರಿಸುವುದು ಎಂದು ಕಾಯ್ದೆಯ ಉಲ್ಲಂಘನೆಯಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿ ಹಾಗೂ ತಹಶೀಲ್ದಾರ್ ರೇಹಾನ್ ಪಾಷ, ವೃತ್ತ ನಿರೀಕ್ಷ ಸಮೀವುಲ್ಲ, ಪಿಎಸ್‌ಐ ಸತೀಶ್‌ನಾಯ್ಕ, ಹಾಗೂ ಪ್ರಿಂಟಿಕ್ ಪ್ರೆಸ್ ಮಾಲಿಕರು ಉಪಸ್ಥಿತರಿದ್ದರು.