ಕಾಡುಗೊಲ್ಲರಿಗೆ ಟಿಕೆಟ್ ನೀಡಲು ಒತ್ತಾಯ
ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ
ಇರುವ ಕಾಡು ಗೊಲ್ಲರು
ಚಳ್ಳಕೆರೆ : ಈಡೀ ರಾಜ್ಯದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕಾಡುಗೊಲ್ಲರಿದ್ದು ಈ ಕಾಡುಗೊಲ್ಲ ಸಮುದಾಯದ ರಾಜಕೀಯ ಬೆಳವಣಿಗೆಗೋಸ್ಕರ ರಾಜ್ಯದ ರಾಜಾಕೀಯ ಪಕ್ಷಗಳು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ವತಿಯಿಂದ ಸಮುದಾಯದ ಮುಖಂಡರಿಗೆ ವಿಧಾನಸಭಾ ಟಿಕೆಟ್ ನೀಡಬೇಕು ಎಂದು ತಾಲೂಕು ಕಾಡುಗೊಲ್ಲರ ಸಂಘದ ಅಧ್ಯಕ್ಷ ಬೂದಿಹಳ್ಳಿ ರಾಜಣ್ಣ ಒತ್ತಾಯಿಸಿದ್ದಾರೆ.
ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಬಹು ಸಂಖ್ಯಾತ ಕಾಡುಗೊಲ್ಲರಿದ್ದು ಎರಡು ರಾಜಾಕೀಯ ಪಕ್ಷಗಳು ಇಲ್ಲಿಯವರೆಗೆ ಯಾವುದೇ ಕಾಡುಗೊಲ್ಲರಿಗೆ ಪ್ರಾಧ್ಯಾನತೆ ನೀಡಿಲ್ಲ ಎಲ್ಲಾ ಪಕ್ಷಗಳಿಗೆ ನಮ್ಮ ಮತ ಮಾತ್ರ ಬೇಕು ನಮಗೆ ಅಧಿಕಾರ ಬೇಡವೇ ಆದ್ದರಿಂದ ಈ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಹಾಗೂ ಕಾಂಗ್ರೆಸ್ ಪಕ್ಷದ ವತಿಯಿಂದ ಕಾಡು ಗೊಲ್ಲ ಸಮುದಾಯದ ಕಾಡುಗೊಲ್ಲ ಮುಖಂಡರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ.