ಚಳ್ಳಕೆರೆ : 2023ರ ಚುನಾವಣೆ ಹೊಸ್ತಿಲಲ್ಲಿ ಮತದಾರ ಗುರುತಿನ ಚೀಟಿ ನೀಡುವ ಕಾರ್ಯ ಮಾತ್ರ ಭರದಿಂದ ಸಾಗುತ್ತಿದೆ
ಅದರಂತೆ ಕಳೆದ ಹಲವು ದಿನಗಳಿಂದ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊAಡು ಜಾತಕ ಪಕ್ಷಿಯಂತೆ ಕಾಯುತ್ತಿದ್ದರು ಆದರೆ ಈಗ ಚುನಾವಣೆಗೆ ಕೇವಲ ಒಂದು ತಿಂಗಳ ಬಾಕಿ ಇರುವ ಕಾರಣ ಮತದಾರರ ಮನೆ ಬಾಗಿಲಿಗೆ ಗುರುತಿನ ಚೀಟಿ ತಲುಪಿಸುವ ಮಹತ್ವದ ಕಾರ್ಯಕ್ಕೆ ಚಳ್ಳಕೆರೆ ತಾಲೂಕಿನ ಚುನಾವಣೆ ಅಧಿಕಾರಿಗಳು ಮಾಡುತ್ತಿದ್ದಾರೆ.
ಚಳ್ಳಕೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೊಸ ಮತದಾರರ, ತಿದ್ದುಪಡಿ, ಮತದಾರ ಪಟ್ಟಿ ಪರಿಷ್ಕರಣೆ ಮಾಡಿದ ಸುಮಾರು 9 ಸಾವಿರಕ್ಕೂ ಹೆಚ್ಚು ಹೊಸ ಡಿಜಿಟಲ್ ಮತದಾರರ ಗುರುತಿನ ಚೀಟಿಗಳನ್ನು ಅಂಚೆ ಮೂಲಕ ಮನೆಮನೆಗೆ ತಲುಪಿಸುವ ಪ್ರಕ್ರಿಯೆಗೆ ಚುನಾವಣೆ ಶಾಖೆ ಶಿರಸ್ತೆದಾರ್ ಸದಾಶಿವಪ್ಪ ಹಾಗೂ ಸಿಬ್ಬಂದಿಗಳು ಸಿದ್ದತೆ ಮಾಡುತ್ತಿದ್ದಾರೆ.
ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 18 ವರ್ಷ ತುಂಬಿದವರು ಹೊಸದಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊAಡಿರುವ ಯುವ ಮತದಾರರ ಹಾಗೂ ತಿದ್ದುಪಡಿ, ಸೇರ್ಪಡೆ ಮಾಡಿಕೊಂಡ ಮತದಾರರ ಗುರುತಿನ ಚೀಟಿಗಳನ್ನು ಅಂಚೆ ಮೂಲಕ ಮನೆ ಮನೆಗೆ ಚುನಾವಣಾ ಗುರುತಿನ ಕಾರ್ಡ್ ತಲುಪಿಸಲು ಮುಂದಾಗಿದ್ದಾರೆ ಎಂದು ತಹಶೀಲ್ದಾರ್ ರೇಹಾನ್ ಪಾಷ ಮಾಹಿತಿ ನೀಡಿದ್ದಾರೆ.