ಚಳ್ಳಕೆರೆ : ಕೇಂದ್ರ ಸರ್ಕಾರದ ಪಿಎಂಕಿಸಾನ್ ಯೋಜನೆಯಡಿ ನೋಂದಾಯಿತ ಅರ್ಹ ರೈತರು ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯವಾಗಿದ್ದು, ಹೊಸದಾಗಿ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಸಹಾಯಕ ಕೃಷಿ ನಿದೇರ್ಶಕ ಡಾ. ಅಶೋಕ್ ಹೇಳಿದ್ದಾರೆ.
ನಮ್ಮ ಚಳ್ಳಕೆರೆ ಟಿವಿಯೊಂದಿಗೆ ಮಾತನಾಡಿದ ಅವರು ರೈತರಿಗೆ ಈಗಾಗಲೇ ಅನೇಕ ಬಾರಿ ಮನವಿ ಮಾಡಿದ್ದರೂ ಕೆಲವು ರೈತರು ಇ-ಕೆವೈಸಿ ಮಾಡಿಸಿರುವುದಿಲ್ಲ. ಅರ್ಹ ರೈತ ಫಲಾನುಭವಿಗಳು hಣಣಠಿ://ಠಿmಞisಚಿಟಿ.gov.iಟಿ Websiಣe ಗೆ ಭೇಟಿ ನೀಡಿ ಆಧಾರ್ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆ ಸಮೂದಿಸಬೇಕು, ಮೊಬೈಲ್ ಸಂಖ್ಯೆಗೆ ಬರುವ ಓ.ಟಿ.ಪಿ ನಮೂದಿಸಿ ಉಚಿತವಾಗಿ ಇ-ಕೆವೈಸಿ ಮಾಡಿಕೊಳ್ಳಬಹುದು.
ಆಧಾರ್ ಸಂಖ್ಯೆಗೆ ಮೊಬೈಲ್ ನಂಬರ್ ನೋಂದಾವಣೆಯಾಗದ. ಅಥವಾ ಓ.ಟಿ.ಪಿ ಸೃಜನೆಯಾಗದ ರೈತರು ಗ್ರಾಮ ಒನ್ ಸೇವಾ ಕೇಂದ್ರಕ್ಕೆ (ಸಿ.ಇ.ಸಿ) ಭೇಟಿ ನೀಡಿ ಬಯೋಮೆಟ್ರಿಕ್ ಉಪಕರಣದಲ್ಲಿ ಬೆರಳಚ್ಚು ನಮೂದಿಸಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು,
ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು. ಇ-ಕೆವೈಸಿ ಮಾಡಿಸಿಲು ಇದು ಕೊನೆಯ ಅವಕಾಶವಾಗಿದೆಯೆಂದು ಪ್ರಕಣೆಯಲ್ಲಿ ತಿಳಿಸಿದ್ದಾರೆ,

Namma Challakere Local News
error: Content is protected !!