ಚಳ್ಳಕೆರೆ : ಇಂದು ಕರ್ನಾಟಕ ರಾಜ್ಯದ 24 ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದರು.
ಇಂದು ಮಧ್ಯಾಹ್ನ 12.30 ಸ ಸುಮಾರಿಗೆ ರಾಜ್ಯಪಾಲ ಥಾವತ್ ಚಂದ್ ಗೆಹಲೋತ್ ಅವರು ಸಿದ್ದರಾಮಯ್ಯ ಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞೆ ಭೋಧಿಸಿದರು.
ಇನ್ನೂ ಕರ್ನಾಟಕ ರಾಜ್ಯದ ನೂತನ ಮಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದರು
ಈ ಸಂಧರ್ಭದಲ್ಲಿ ಕಾಂಗ್ರೆಸ್‌ನ ವರಿಷ್ಠರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಎಐಸಿಸಿ ಅದ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇನ್ನೂ ದೇಶದ ಹಲವು ರಾಜ್ಯದ ಮುಖ್ಯಮಂತ್ರಿಗಳು ಹಲವು ಗಣ್ಯರು ಭಾಗಿಯಾಗಿದ್ದರು.
ಜೊತೆಯಲ್ಲಿ ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಸೇರಿದಂತೆ 8 ಮಂದಿ ನೂತನ ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಿದರು.
ಈ ಕಾರ್ಯಕ್ರಮಕ್ಕೆ ನಾಡಿನ ಲಕ್ಷಾಂತರ ಜನರು ಸಾಕ್ಷಿಕರಿಸಿದರು.