ನಾಯಕನಹಟ್ಟಿ:: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು 2023ರ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನಗಳ ಪಡೆದು ಅಧಿಕಾರದ ಚುಕ್ಕಾಣಿ ಹಿಡಿದಿದೆ ಸನ್ಮಾನ್ಯ ಸಿದ್ದರಾಮಯ್ಯನವರು ಎರಡನೇ ಬಾರಿ ಮುಖ್ಯಮಂತ್ರಿ ಯಾಗಿ ಅಧಿಕಾರ ಸ್ವೀಕರಿಸಿದ್ದಾರೆ ಮೊಳಕಾಲ್ಮುರು ಕ್ಷೇತ್ರವು ಬಹಳ ಹಿಂದುಳಿದ ಪ್ರದೇಶ ಈ ಕ್ಷೇತ್ರದಲ್ಲಿ ಅತಿ ಹೆಚ್ಚು ಕೃಷಿ ಕಾರ್ಮಿಕರು ವಾಸಿಸುತ್ತಿದ್ದು ಕ್ಷೇತ್ರದ ಎಲ್ಲಾ ಕೆರೆಗಳಿಗೆ ನೀರು ಹರಿಸುವಂತ ಕೆಲಸವಾಗಬೇಕು ಮತ್ತು ಇಡೀ ಕ್ಷೇತ್ರವನ್ನ ಅಭಿವೃದ್ಧಿ ಪಥದತ್ತ ಕೊಂಡೆಯಲು ಶಾಸಕ ಎನ್ ವೈ ಗೋಪಾಲಕೃಷ್ಣರವರಿಗೆ ಸಚಿವ ಸ್ಥಾನ ನೀಡುವಂತೆ ನಾಯಕನಹಟ್ಟಿಯ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಕಾಂಗ್ರೆಸ್ ಮುಖಂಡ ಹೊಸಹಳ್ಳಿ ತಿಪ್ಪೇಸ್ವಾಮಿ ಒತ್ತಾಯ ಮಾಡಿದ್ದಾರೆ.
ಅವರು ಗುರುವಾರ ಪಟ್ಟಣದ ಪರಿವೀಕ್ಷಣ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ ಕಳೆದ ಐದು ವರ್ಷದ ಹಿಂದೆ ಸಚಿವ ಬಿ ಶ್ರೀರಾಮುಲು ಯಾವುದೇ ಕೆಲಸ ಮಾಡದೆ ಸುಳ್ಳು ಭರವಸೆಗಳನ್ನು ನೀಡಿ ಮೊಳಕಾಲ್ಮೂರು ಕ್ಷೇತ್ರವನ್ನು ಅಭಿವೃದ್ಧಿಪಡಿಸಲಿಲ್ಲ ನಮ್ಮ ನೆಚ್ಚಿನ ಸರಳ ಸಜ್ಜನಿಕೆಯ ಶಾಸಕರಾದ ಎನ್ ವೈ ಗೋಪಾಲಕೃಷ್ಣರವರಿಗೆ ಸಚಿವ ಸ್ಥಾನ ನೀಡಿದರೆ ಮೊಳಕಾಲ್ಮುರು ಕ್ಷೇತ್ರವನ್ನು ಅಭಿವೃದ್ಧಿ ಪಥದತ್ತ ಕೊಂಡಯ್ಯುತ್ತಾರೆ ದಕ್ಷಿಣ ಭಾರತದ ಕಾಶಿ ಎಂದೇ ಪ್ರಸಿದ್ಧವಾದ ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಲಕ್ಷಾಂತರ ಭಕ್ತಾದಿಗಳು ಬಂದು ಹೋಗುವ ಸ್ಥಳವಿದೆ ಸ್ಥಳದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗಲಿ ಇದುವರೆಗೂ ಆಗಿಲ್ಲ ನಾಯಕನಹಟ್ಟಿ ಪಟ್ಟಣವು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದೆ ಈ ಭಾಗದಲ್ಲಿ ಅತಿ ಹೆಚ್ಚು ರೈತರು ಇರುವ ರೈತರಿಗೆ ನೀರಾವರಿ ಸೌಲಭ್ಯಗಳು ರೈತರ ಮಕ್ಕಳಿಗೆ ಸರ್ಕಾರಿ ಪ್ರೌಢಶಾಲೆ ಇಲ್ಲ ಸರ್ಕಾರಿ ಕಾಲೇಜು ಸರ್ಕಾರಿ ಬಸ್ ನಿಲ್ದಾಣ ಖಾಸಗಿ ಬಸ್ ನಿಲ್ದಾಣ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಸೃಷ್ಟಿಸುವಂತಹ ಕೆಲಸವಾಗಬೇಕು ಆದ್ದರಿಂದ ಮೊಳಕಾಲ್ಮೂರು ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಶಾಸಕ ಎನ್ ವೈ ಗೋಪಾಲಕೃಷ್ಣ ರವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ