ಚಳ್ಳಕೆರೆ : ಭಾರತದಲ್ಲಿ ಮೇ ದಿನವೇ ಕಾರ್ಮಿಕ ದಿನ. 20ನೆಯ ಶತಮಾನದ ಎರಡನೆಯ ದಶಕದ ದ್ವಿತೀಯಾರ್ಧದಲ್ಲಿ-ಕಾರ್ಮಿಕ ಸಂಘ ಚಳವಳಿಯ ಪ್ರಭಾವ ಹೆಚ್ಚಿದಾಗಿನಿಂದ-ಇದರ ಆಚರಣೆ ಆರಂಭವಾಯಿತು ಎಂದು ಕಮ್ಯೂನಿಸ್ಟ್ ಪಕ್ಷದ ರಾಜ್ಯ ಕಾರ್ಯದರ್ಶಿ ಸ್ವಾತಿ ಸುದಂರೇಶ್ ಹೇಳಿದರು.
ಅವರು ನಗರದ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಕಾರ್ಮಿಕರ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು, ಮೇ ದಿನಾಚರಣೆಯಲ್ಲಿ ಭಾಗವಹಿಸಿದ ಮೊಟ್ಟಮೊದಲಿನ ಭಾರತೀಯ ಕಾರ್ಮಿಕರು ಇಂಗ್ಲೆAಡಿನಲ್ಲಿದ್ದ ಭಾರತೀಯ ನಾವಿಕರು. ಭಾರತಕ್ಕೆ ಸ್ವಾತಂತ್ರ‍್ಯ ನೀಡಬೇಕೆಂಬ ಘೋಷಣೆಯನ್ನೊಳಗೊಂಡ ಪ್ರದರ್ಶನಚಿತ್ರಗಳನ್ನು ಹಿಡಿದು ಮೆರವಣಿಗೆಯಲ್ಲಿ ಅವರು ಕುಳಿತಿದ್ದರು ಎಂದು ಮೆಲುಕು ಹಾಕಿದರು.
ಕಾರ್ಯಕ್ರÀಮದ ಅದ್ಯಕ್ಷತೆ ವಹಿಸಿಕೊಂಡ ಸಿ.ವೈ.ಶಿವರುದ್ರಪ್ಪ ಮಾತನಾಡಿ, 1969ರಲ್ಲಿ ಭಾರತ ರಾಷ್ಟ್ರೀಯ ಕಾರ್ಮಿಕ ಸಂಘಗಳ ಕಾಂಗ್ರೆಸ್ ಒಂದನ್ನು ಬಿಟ್ಟು ಉಳಿದೆಲ್ಲ ಕಾರ್ಮಿಕ ಸಂಘಗಳೂ ಒಟ್ಟಾಗಿ, ತಮ್ಮ ಹಕ್ಕುಗಳನ್ನು ಸಾಧಿಸಲು ಭಾರಿ ಮೆರವಣಿಗೆಯಲ್ಲಿ ಪಾರ್ಲಿಮೆಂಟ್ ಭವನದ ಬಳಿಗೆ ಮೆರವಣಿಗೆಯಲ್ಲಿ ಹೋಗಿ ಪ್ರದರ್ಶನ ನಡೆಸಿದವು ಎಂದರು.

ಇದೇ ಸಂಧರ್ಭದಲ್ಲಿ ನಗರಸಭೆ ಉಪಾದ್ಯಕ್ಷೆ ಮಂಜುಳಾ ಪ್ರಸನ್ನ ಕುಮಾರ್, ಸಿಪಿಐ ತಾಲೂಕು ಕಾರ್ಯದರ್ಶಿ ದೊಡ್ಡ ಉಳ್ಳಾರ್ತಿ ಕರಿಯಣ್ಣ , ಅಕ್ಷರ ದಾಸೋಹ ಸಂಘಟನೆ ವಿಶಾಲಕ್ಷಿö್ಮ, ಸಿಪಿಐ ಕಾರ್ಯದರ್ಶಿ ಜಾಪರ್ ಶರೀಪ್, ಪೆನ್ನಯ್ಯ, ತಿಪ್ಪೆರುದ್ರಪ್ಪ, ಎಲೆತಿಪ್ಪೆಸ್ವಾಮಿ, ವೀರೆಂದ್ರಸ್ವಾಮಿ, ಅಂಗನವಾಡಿ ಕಾರ್ಯಕರ್ತೆಯರು ಇತರರು ಇದ್ದರು.

About The Author

Namma Challakere Local News
error: Content is protected !!