ಚಳ್ಳಕೆರೆ : ರಾಜ್ಯಾದ್ಯಾಂತ ಆರಂಭವಾದ ಶಾಲೆಗಳ ಪ್ರಾರಂಭವೋತ್ಸವಕ್ಕೆ ಇಂದು ಚಳ್ಳಕೆರೆ ನಗರದ ಬಿಸಿನೀರು ಮುದ್ದಪ್ಪ ಸರಕಾರಿ ಪ್ರೌಢಶಾಲಾ ಆವರಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ್ದ ಶಾಲೆಗಳ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ನೂತನ ಶಾಸಕ ಟಿ.ರಘುಮೂರ್ತಿ ಚಾಲನೆ ನೀಡಿ ಮಾತನಾಡಿದರು.
ಕಳೆದ ಬಾರಿ ಈಡೀ ಜಿಲ್ಲೆಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಮೇಲುಗೈ ಸಾಧಿಸುವ ಮೂಲಕ ಪ್ರಥಮ ಬಂದಿರುವುದು ನಮ್ಮೆಲಿರಿಗೆ ತೃಪ್ತಿ ತಂದಿದೆ ಆದ್ದರಿಂದ ಈ ಬಾರಿ ಕೂಡ ನಿಮ್ಮ ಫಲಿತಾಂಶ ಗಣನೀಯವಾಗಿ ಉತ್ತಮವಾಗಿರಬೇಕು, ವಿದ್ಯಾರ್ಥಿಗಳು ಬೇಸಿಗೆ ರಜೆಯ ನಿಮಿತ್ತ ಶಾಲೆಯನ್ನು ಮರೆತು ಓದುವದನ್ನು ಬಿಟ್ಟು ಮನಸ್ಸೋ ಇಚ್ಛೆ ಕುಣಿದು ಕುಪ್ಪಳಿಸಿ, ಬೇಸಿಗೆ ರಜೆಯಲ್ಲಿ ಮಜಾ ಅನುಭವಿಸಿದ್ದ ಮಕ್ಕಳು ಮತ್ತೆ ಶಾಲೆಯತ್ತ ಹೆಜ್ಜೆ ಹಾಕಿದ್ದಾರೆ ಆದ್ದರಿಂದ ಶಾಲೆಗೆ ಬರುವ ಮಕ್ಕಳನ್ನು ಅದ್ದೂರಿಯಾಗಿ ಗುಲಾಬಿ ಹೂ ಹಾಗೂ ಸಿಹಿ ನೀಡುವ ಮೂಲಕ ಇಂದು ಸ್ವಾಗತಿಸಿರುವುದು ಶ್ಲಾಘನೀಯ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

ಸರಕಾರಿ ಶಾಲೆಗಳ ಕಟ್ಟಡ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡುವ ಮೂಲಕ ಸುಜ್ಜಿತ ಕಟ್ಟಡ ನಿರ್ಮಾಣ ಮಾಡಲಾಗಿದ್ದು ಸರಕಾರಿ ಶಾಲೆಗಳಿಗೆ ಹೆಚ್ಚಿನ ಸಂಖ್ಯೆಲ್ಲಿ ಮಕ್ಕಳು ಬರುವಂತೆ ಶಿಕ್ಷಕರು ಸೇರಿಸಿಕೊಳ್ಳಬೇಕು ಯಾವ ವಿದ್ಯಾರ್ಥಿ ಶಾಲೆಯಿಂದ ಹೊರಗುಳಿಯದ ಹಾಗೂ ಗೈರು ಹಾಜರಿಯಾಗದಂತೆ ಶಿಕ್ಷಕರು ನಿಗಾವಹಿಸ ಬೇಕು ಪಠ್ಯಗಳ ಜತೆಗೆ ಪಠ್ಯೇತ ಚಟುವಟಿಕೆಗಳನ್ನು ಕಲಸುವ ಮೂಲಕ ಮಕ್ಕಳ ಕಲಿಕೆಗೆ ಪ್ರೋತ್ಸಹ ನೀಡಬೇಕು ಎಂದರು.

ಸಕಾರಿ ಶಾಲೆಯ ಮಕ್ಕಳಿಗೆ ಉಚಿತ ಶೂ, ಸಮವಸ್ತç, ಪಠ್ಯ ಪುಸ್ತಕ, ಬಿಸಿಯೂಟ, ಸೇರಿದಂತೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು ವಿದ್ಯಾರ್ಥಿಗಳು ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಶಿಕ್ಷಣದಲ್ಲಿ ಶ್ರದ್ದೆ, ಭಕ್ತಿಯಿಂದ ಹೆಚ್ಚು ಓಡುವ ಮೂಲಕ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿ ಶಾಲೆ ಹಾಗೂ ಪೋಷಕರಿಗೆ ಕೀರ್ತಿ ತರುವಂತಾಗ ಬೇಕು ಎಂದು ತಿಳಿಸಿದರು.
ಬಿಇಒ ಸುರೇಶ್ ಮಾತನಾಡಿ ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿದೆ, ಕೊರೆಯ ನಡುವೆ ಗೌರವ ಶಿಕ್ಷಕರನನ್ನು ನೇಮಕ ಮಾಡಿಕೊಂಡು ಶಿಕ್ಷಣ ಮಗುವಿನ ಹಕ್ಕಾಗಿದ್ದು, ಶಿಕ್ಷಣಕ್ಕಾಗಿ ಸರ್ಕಾರ ಮಕ್ಕಳಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತದೆ ಅವುಗಳನ್ನು ಸದ್ಬಳಕೆ ಮಾಡಿಕೊಂಡು, ಉತ್ತಮ ಶಿಕ್ಷಣ ನೀಡಲಾಗುತ್ತಿದೆ ವಿದ್ಯಾರ್ಥಿಗಳು ಶಿಕ್ಷಣ ಪಡೆದು ಸಮಾಜದಲ್ಲಿ ಗೌರವಯುತ ಜೀವನ ನಡೆಸುವಂತಾಗಬೇಕು ಎಂದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತç ಹಾಗೂ ಪಠ್ಯ ಪುಸ್ತಕ ವಿತರಣೆ ಮಾಡಿದರು. ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಜೆ.ರಾಘವೇAದ್ರ ಮಾಜಿ ನಗಸಭೆ ಅಧ್ಯಕ್ಷೆ ಸುಮಕ್ಕ, ಉಪಾಧ್ಯಕ್ಷೆ ಮಂಜುಳ. ಸದಸ್ಯರಾದ ಪ್ರಕಾಶ್, ಮಲ್ಲಿಕಾರ್ಜುನ, ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾಗೂ ಶಿಕ್ಷಣ ಸಂಯೋಜಕರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!