ಚಿತ್ರದುರ್ಗ, ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠಕ್ಕಿಂದು ರಾಜ್ಯದ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಭೇಟಿ ನೀಡಿ, ಕರ್ತೃಗದ್ದುಗೆ ದರ್ಶನ ಪಡೆದರು.
ನಂತರ ಶ್ರೀ ಬಸವಪ್ರಭು ಸ್ವಾಮೀಜಿಯವರಿಂದ ಗೌರವ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಶಾಸಕ ಕೆ.ಸಿ. ವೀರೇಂದ್ರ (ಪಪ್ಪಿ), ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಾಜಪೀರ್, ಎಸ್.ಎಂ.ಎಲ್. ತಿಪ್ಪೇಸ್ವಾಮಿ, ಹೆಚ್. ಆನಂದಪ್ಪ, ಡಿ.ವಿ.ಎಸ್. ಪ್ರದೀಪ್ ಮೊದಲಾದವರಿದ್ದರು.