ಚಿತ್ರದುರ್ಗ (ಕರ್ನಾಟಕ ವಾರ್ತೆ)ಜೂನ್.8:
ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಂತೆ ಪೂರಕ ಪರೀಕ್ಷೆ ಕಾರ್ಯವನ್ನು ನಿಷ್ಠೆ, ಭದ್ರತೆ ಮತ್ತು ಕಾಳಜಿಯಿಂದ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು.
ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬುಧವಾರ ನಡೆದ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಯ ಪೂರ್ವ ಸಿದ್ದತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜೂನ್ 12 ರಿಂದ 19 ರವರೆಗೆ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ ನಡೆಯಲಿವೆ. ಸಣ್ಣ ತಪ್ಪು ಆಗದಂತೆ ಪ್ರಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಪ್ರದೇಶವನ್ನು 144 ಸೆಕ್ಷನ್ ನಿಷೇಧಾಜ್ಞೆ ಜಾರಿಗೊಳಿಸಬೇಕು. ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ಭದ್ರತೆಯಿಂದ ತಲುಪಿಸಬೇಕು. ಪೂರಕ ಪರೀಕ್ಷೆಯನ್ನು ಯಶಸ್ವಿಯಾಗಿ ಮಾಡಬೇಕು ಎಂದು ತಿಳಿಸಿದರು.
ಡಿ.ಡಿ.ಪಿ.ಐ ರವಿಶಂಕರ್ ರೆಡ್ಡಿ ಮಾತನಾಡಿ. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ನೊಂದಣಿ ಸಂಖ್ಯೆಗಳ ಕ್ರಮಬದ್ಧತೆ, ಪೊಲೀಸ್ ಬಂದೋಬಸ್ತ್, ಆರೋಗ್ಯ ಸಹಾಯಕರು ನೇಮಿಸಬೇಕು. ಕೇತ್ರಶಿಕ್ಷಣಾಧಿಕಾರಿಗಳು ರಜೆ ತೆಗೆದುಕೊಳ್ಳದೆ ಪರೀಕ್ಷೆಯ ಸಂಪೂರ್ಣ ಜವಾಬ್ದಾರಿ ವಹಿಸಿ ಸಣ್ಣ ತಪ್ಪು ಆಗದಂತೆ ನೊಡಿಕೊಳ್ಳಬೇಕು. ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ವಹಿಸದ ಕೆಲಸವನ್ನು ಬದ್ಧತೆಯಿಂದ ಮಾಡಿ ಪ್ರಮಾಣಿಕವಾದಂತಹ ಫಲಿತಾಂಶ ತರಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಜಿಲ್ಲಾ ಖಜಾನಾಧಿಕಾರಿ ರತ್ನಕುಮಾರಿ ಸೇರಿದಂತೆ ಕ್ಷೇತ್ರಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಇದ್ದರು.

Namma Challakere Local News
error: Content is protected !!