ಚಿತ್ರದುರ್ಗ ಜೂನ್.9:
ಜೂನ್ 12 ರಿಂದ ಜೂನ್ 19 ವರೆಗೆ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ ನಡೆಯಲಿರುವ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಅಪರ ಜಿಲ್ಲಾಧಿಕಾರಿ ಟಿ. ಜವರೇಗೌಡ ಆದೇಶಿಸಿದ್ದಾರೆ.

ಚಿತ್ರದುರ್ಗ, ಚಳ್ಳಕೆರೆ, ಮೊಳಕಾಲ್ಮೂರು, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ನಗರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಅಕ್ರಮ ಹಾಗೂ ಅವ್ಯವಹಾರ ತಡೆಗಟ್ಟುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ಸಿ.ಆರ್.ಪಿ.ಸಿ ಕಲಂ 144 ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷೆ ನಡೆಯುವ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ ಹಾಗೂ ಕಂಪ್ಯೂಟರ್, ಇಂಟರ್‍ನೆಟ್ ಕೇಂದ್ರಗಳನ್ನು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮುಚ್ಚುವಂತೆ, ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಮೊಬೈಲ್ ಫೋನ್‍ಗಳನ್ನು ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರದಂತೆ ಆದೇಶ ಹೊರಡಿಸಲಾಗಿದೆ.

About The Author

Namma Challakere Local News
error: Content is protected !!