ಚಿತ್ರದುರ್ಗ ಜೂನ್.12:
ಜೂನ್ 11ರಂದು ಸುರಿದ ಮಳೆಯ ವಿವರದನ್ವಯ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ರಾಮಗಿರಿ ಹಾಗೂ ಹೊಸದುರ್ಗ ತಾಲ್ಲೂಕಿನ ಮಾಡದಕೆರೆಯಲ್ಲಿ 20 ಮಿ.ಮೀ ಮಳೆಯಾಗಿದೆ.
ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 14.6 ಮಿ.ಮೀ, ಬಾಗೂರು 4.2 ಮಿ.ಮೀ, ಮತ್ತೋಡು 3.2 ಮಿ.ಮೀ, ಶ್ರೀರಾಂಪುರ 10.2 ಮಿ.ಮೀ ಮಳೆಯಾಗಿದೆ. ಹಿರಿಯೂರು ಹಿರಿಯೂರಿನಲ್ಲಿ 6.6 ಮಿ.ಮೀ, ಬಬ್ಬೂರು 1.8 ಮಿ.ಮೀ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಭರಮಸಾಗರದಲ್ಲಿ 4.2 ಮಿ.ಮೀ ಮಳೆಯಾಗಿದೆ.
6 ಮನೆಗಳು ಭಾಗಶಃ ಹಾನಿ: ಭಾನುವಾರ ಸುರಿದ ಮಳೆಯಿಂದಾಗಿ ಹಿರಿಯೂರು ತಾಲ್ಲೂಕಿನಲ್ಲಿ 6 ಮನೆಗಳು ಭಾಗಶಃ ಹಾನಿಯಾಗಿದ್ದು, 2.2 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾಗೂ 1 ದೊಡ್ಡ ಜಾನುವಾರು ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

