ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.12 :
ಹೊಳಲ್ಕೆರೆ ತಾಲ್ಲೂಕಿನ ತಾಳಿಕಟ್ಟೆ ಗ್ರಾಮ ನಿವಾಸಿ ರಮೇಶಪ್ಪ (38ವರ್ಷ) ತಂದೆ ಈಶ್ವರಪ್ಪ ಕಾಣೆಯಾಗಿರುವ ಕುರಿತು ಜನವರಿ 24 ರಂದು ಹಾಗೂ ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಕಟ್ಟಿಗೆಹಳ್ಳಿ ಗ್ರಾಮ ನಿವಾಸಿ ಕೆ.ಬಿ ಬಸವಂತಕುಮಾರ(37ವರ್ಷ) ತಂದೆ ಕೆ.ಎಂ ಬಸವರಾಜಪ್ಪ, ಕಾಣೆಯಾಗಿರುವ ಕುರಿತು ಜೂನ್ 8 ರಂದು ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
5 ಅಡಿ ಎತ್ತರ, ದುಂಡು ಮುಖ, ದೃಢಕಾಯ ಶರೀರ, ಎಣ್ಣೆಗೆಂಪು ಮೈಬಣ್ಣ ಹೊಂದಿರುವ ರಮೇಶಪ್ಪ ಕನ್ನಡ ಭಾಷೆ ಮಾತನಾಡುತ್ತಾರೆ. 4.1 ಅಡಿ ಎತ್ತರ, ತೆಳ್ಳನೆಯ ಮೈಕಟ್ಟು, ಕಪ್ಪು ಮೈಬಣ್ಣ ಹೊಂದಿರುವ ಕೆ.ಬಿ ಬಸವಂತಕುಮಾರ ಕನ್ನಡ ಭಾಷೆ ಮಾತನಾಡುತ್ತಾರೆ. ಈ ಇಬ್ಬರು ಕುರಿತು ಮಾಹಿತಿ ತಿಳಿದು ಬಂದಲ್ಲಿ ಹೊಳಲ್ಕೆರೆ ಪೊಲೀಸ್ ಠಾಣೆಗೆ ಸಂಪರ್ಕಿಸಬೇಕೆಂದು ಹೊಳಲ್ಕೆರೆ ಪೊಲೀಸ್ ಠಾಣೆಯ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ತಿಳಿಸಿದ್ದಾರೆ.

Namma Challakere Local News
error: Content is protected !!