ಚಿತ್ರದುರ್ಗದ ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ವತಿಯಿಂದ 2023-24 ನೇ ಸಾಲಿನ ವಿಶೇಷ ವಾರ್ಷಿಕ ಶಿಬಿರ ಚಿತ್ರದುರ್ಗ ತಾಲ್ಲೂಕಿನ ಕುರುಬರಹಳ್ಳಿಯಲ್ಲಿ ಹಮ್ಮಿಕೊಂಡಿದ್ದು. ಜೂನ್ 15 ರಂದು ಸಂಜೆ 6ಕ್ಕೆ ಅಗ್ನಿ ಅನಾಹುತದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ.
ಮುಖ್ಯ ಅತಿಥಿಗಳಾಗಿ ಸ್ನಾತಕೋತ್ತರ ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಶಿವಪ್ಪ, ಇತಿಹಾಸ ವಿಭಾಗದ ಸಹ ಪ್ರಾಧ್ಯಾಪಕ ಎ. ಮಹಬೂಬ್ ಭಾಷಾ, ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕ ಎಸ್.ಬಿ.ಶಿವಪ್ರಸಾದ್, ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಎಂ. ಸುನೀತ ಸೇರಿದಂತೆ ಪ್ರಾಧ್ಯಾಪಕರು, ಉಪನ್ಯಾಸಕರು ಮತ್ತಿತರರು ಭಾಗವಹಿಸುವವರು.
ಚಿತ್ರದುರ್ಗ ಅಗ್ನಿ ಶಾಮಕ ಠಾಣಾಧಿಕಾರಿ ಜಿ. ಮಹಲಿಂಗಪ್ಪ ಅವರು ಅಗ್ನಿ ಅನಾಹುತ ವಿಷಯದ ಕುರಿತು ಉಪನ್ಯಾಸ ನೀಡುವರು. ಗ್ರಾಮ ಪಂಚಾಯಿತಿ ಸದಸ್ಯೆ ಕೊಲ್ಲಮ್ಮ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

About The Author

Namma Challakere Local News
error: Content is protected !!