ಚಿತ್ರದುರ್ಗ(ಕರ್ನಾಟಕ ವಾರ್ತೆ) ಜೂನ್.21:
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ 2023-24ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಪಿಯುಸಿ ಮತ್ತು ಪಿಯುಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಂದ ಖಾಲಿ ಇರುವ ಸ್ಥಾನಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಜುಲೈ 15 ಅರ್ಜಿ ಸಲ್ಲಿಸಲು ಕೊನೆಯ ದಿನ.
ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವಿದ್ಯಾರ್ಥಿಗಳು https://shp.karnataka.gov.in ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.