ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.7:
ಚಿತ್ರದುರ್ಗದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ)ದಲ್ಲಿ 2023-24ನೇ ಸಾಲಿನ ಡಿಪ್ಲೊಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ (DTDM ಹಾಗೂ ಡಿಪ್ಲೊಮಾ ಇನ್ ಮೆಕಾಟ್ರಾನಿಕ್ಸ್ (DMCH) ಕೋರ್ಸುಗಳಿಗೆ ಪ್ರವೇಶ ಪಡೆಯಲು ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಪ್ರವೇಶ ಪ್ರಕ್ರಿಯೆ ಆರಂಭವಾಗಿರುತ್ತದೆ.
ಕೆಲವೇ ಕೆಲವು ಸೀಟುಗಳು ಬಾಕಿ ಇದ್ದು, ಆಸಕ್ತ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಆನ್‍ಲೈನ್ ಅರ್ಜಿ ಸಲ್ಲಿಕೆ ಜೂನ್ 16 ರಿಂದ ಪ್ರಾರಂಭವಾಗಿದ್ದು, ಜೂನ್ 29 ಅರ್ಜಿ ಸಲ್ಲಿಸಲು ಕೊನೆಯ ದಿನ. ಜುಲೈ 1 ರಂದು ಮೊದಲನೇ ಸುತ್ತಿನ ಕೌನ್ಸಲಿಂಗ್ ಹಾಗೂ ಜುಲೈ 6 ರಂದು ಎರಡನೇ ಸುತ್ತಿನ ಕೌನ್ಸಲಿಂಗ್ ನಡೆಯಲಿದೆ.