ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.26:
ಚಿತ್ರದುರ್ಗ ನಗರದ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೋಮವಾರ ಡೇಟ್ ಚಾರಿಟೇಬಲ್ ಸೊಸೈಟಿ, ಬಾಪೂಜಿ ಶಿಕ್ಷಣ ಮಹಾವಿದ್ಯಾಲಯ ಮತ್ತು ಕೆಎಂಎಸ್ ಪದವಿಪೂರ್ವ ಕಾಲೇಜು ಮತ್ತು ಪದವಿ ಕಾಲೇಜು ಸಹಯೋಗದೊಂದಿಗೆ ವಿಶ್ವ ಮಾದಕ ವಸ್ತು ಸೇವನೆ ವಿರೋಧಿ ಮತ್ತು ಕಳ್ಳಸಾಗಾಣಿಕೆ ವಿರೋಧಿ ದಿನ ಆಚರಿಸಲಾಯಿತು.
ಮಾದಕ ವಸ್ತು ಸೇವೆನೆಯಿಂದಾಗುವ ದುಷ್ಪಾರಿಣಾಮಗಳು ಹಾಗೂ ಅದರ ಬಗ್ಗೆ ಜಾಗೃತಿ ಮತ್ತು ಚಿಕಿತ್ಸೆಯ ಮೂಲಕ ವ್ಯಸನಿಗಳ ಪುನರ್‍ಜೀವನದ ಬಗ್ಗೆ ಉಪಯುಕ್ತ ಮಾಹಿತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಡೇಟ್ ಚಾರಿಟೇಬಲ್ ಸೊಸೈಟಿ ಅಧ್ಯಕ್ಷ ಡಾ.ಎಚ್.ಎಸ್.ಶಿವಣ್ಣ, ನಗರ ಠಾಣೆಯ ಸಹಾಯಕ ಪೊಲೀಸ್ ಇನ್ಸ್‍ಪೆಕ್ಟರ್ ಟಿ.ಗಂಗಾಧರಪ್ಪ, ಬಾಪೂಜಿ ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲೆ ಜಯಲಕ್ಷ್ಮಿ, ಡೇಟ್ ಚಾರಿಟೇಬಲ್ ಸೊಸೈಟಿ ಯೋಜನಾ ನಿರ್ದೇಶಕಿ ಗಾಯತ್ರಿ ಮತ್ತು ಸಿಬ್ಬಂದಿ ವರ್ಗದವರು ಇದ್ದರು.