ಚಿತ್ರದುರ್ಗ(ಕರ್ನಾಟಕ ವಾರ್ತೆ) ಜೂನ್.25:
ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ವತಿಯಿಂದ 2023-24ನೇ ಸಾಲಿನಲ್ಲಿ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ ಮತ್ತು ಸಂಸ್ಥೆಗಳಿಗೆ 2023ನೇ ಸಾಲಿಗೆ ರಾಷ್ಟ್ರ ಪ್ರಶಸ್ತಿಯನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 31 ಅರ್ಜಿ ಸಲ್ಲಿಸಲು ಕೊನೆಯ ದಿನ.
ಚಿತ್ರದುರ್ಗ ಜಿಲ್ಲೆಯಲ್ಲಿ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಅರ್ಹ ವಿಕಲಚೇತನರು ಹಾಗೂ ಸಂಸ್ಥೆಗಳು 2023ನೇ ಸಾಲಿಗೆ ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿ ನಮೂನೆಗಳನ್ನು ವೆಬ್‍ಸೈಟ್ www.awards.gov.in ನಲ್ಲಿ ಪಡೆದು ನಿಗದಿತ ನಮೂನೆಯಲ್ಲಿ ಪೂರಕ ದಾಖಲೆಗಳೊಂದಿಗೆ ವಿವರಗಳನ್ನು ಭರ್ತಿ ಮಾಡಿ ಆನ್‍ಲೈನ್ ಮೂಲಕ ಜುಲೈ 31 ರೊಳಗೆ ಅರ್ಜಿ ಸಲ್ಲಿsಸಲು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿ, ಬಾಲಭವನ ಆವರಣ, ಸ್ಟೇಡಿಯಂ ಹತ್ತಿರ, ಚಿತ್ರದುರ್ಗ ದೂರವಾಣಿ ಸಂಖ್ಯೆ 08194-235284 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.

About The Author

Namma Challakere Local News
error: Content is protected !!