ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.28:
ಮೊಳಕಾಲ್ಮೂರು, ಚಳ್ಳಕೆರೆ ಮತ್ತು ಹೊಸದುರ್ಗ ತಾಲ್ಲೂಕು ಕಾನೂನು ಸೇವಾ ಸಮಿತಿಯಲ್ಲಿ ಅರೇ ಕಾಲಿಕ ಸ್ವಯಂ ಸೇವಕರಾಗಿ (ಪಿಎಲ್‍ವಿ) ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೊಳಕಾಲ್ಮೂರು ಮತ್ತು ಚಳ್ಳಕೆರೆ ತಾಲ್ಲೂಕಿನ ಅರೇ ಕಾಲಿಕ ಸ್ವಯಂ ಸೇವಕರ ಹುದ್ದೆಗೆ ಅರ್ಜಿ ಸಲ್ಲಿಸಲು ಜುಲೈ 3 ಕೊನೆಯ ದಿನವಾಗಿದೆ . ಹೊಸದುರ್ಗ ತಾಲ್ಲೂಕಿನ ಅರೇ ಕಾಲಿಕ ಸ್ವಯಂ ಸೇವರಕ ಹುದ್ದೆಗೆ ಅರ್ಜಿ ಸಲ್ಲಿಸಲು ಜುಲೈ 5 ಕೊನೆಯ ದಿನವಾಗಿದೆ.
ಆಸಕ್ತರು ತಮ್ಮ ವೈಯಕ್ತಿಕ ವಿವರಗಳೊಂದಿಗೆ ಸ್ವ ಹಸ್ತಾಕ್ಷರದಿಂದ ಭರ್ತಿ ಮಾಡಿದ ಅರ್ಜಿಯನ್ನು ಆಯಾ ತಾಲ್ಲೂಕಿನ ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಿಗೆ ಸಲ್ಲಿಸಬಹುದಾಗಿದೆ.
ಅವಧಿ ಮುಗಿದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ತಿಳಿಸಿದ್ದಾರೆ.