ಜೂನ್ 30 ರಂದು ಸ್ನೇಹ ಸಂಭ್ರಮ
ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.28:
ಕಾಲೇಜು ಶಿಕ್ಷಣ ಇಲಾಖೆ, ದಾವಣಗೆರೆ ವಿಶ್ವವಿದ್ಯಾಲಯ, ಚಿತ್ರದುರ್ಗ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ ಸ್ನೇಹ ಸಂಭ್ರಮ-2023ರ ಅಂತಿಮ ವರ್ಷದ ಬಿ.ಎ ಮತ್ತು ಬಿ.ಕಾಂ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಇದೇ ಜೂನ್ 30 ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಸರ್ಕಾರಿ ಕಲಾ ಕಾಲೇಜು ಸ್ನಾತಕೋತ್ತರ ಕನ್ನಡ ವಿಭಾಗ ಸಹಪ್ರಾಧ್ಯಾಪಕಿ ಡಾ. ಸಿ.ಬಿ. ಪ್ರೇಮಪಲ್ಲವಿ ಉದ್ಘಾಟನೆ ನೇರವೇರಿಸುವರು. ಕಾಲೇಜಿನ ಪ್ರಾಂಶುಪಾಲ ಡಾ.ಹೆಚ್. ಗುಡ್ಡದೇಶ್ವರಪ್ಪ ಅಧ್ಯಕ್ಷತೆ ವಹಿಸುವರು. ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಡಾ.ಸಿ.ಚನ್ನಕೇಶವ, ಐ.ಕ್ಯೂ.ಎ.ಸಿ ಸಂಚಾಲಕ ಡಾ.ಶಿವಣ್ಣ, ಪತ್ರಾಂಕಿತ ವ್ಯವಸ್ಥಾಪಕ ಕೆ.ಎನ್.ಬಸಣ್ಣ ಗೌಡ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.