ಚಳ್ಳಕೆರೆ: ಎಸ್ ಆರ್ ಎಸ್ ಹೆರಿಟೇಜ್ ಶಾಲೆಯಲ್ಲಿ ಗುರು ಪೂರ್ಣಿಮಾದ ಅಂಗವಾಗಿ ಪೋಷಕರಿಗೆ ಪಾದಪೂಜೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. 6ನೇ ತರಗತಿ ವಿದ್ಯಾರ್ಥಿಗಳು ಪೋಷಕರಿಗೆ ಪಾದಪೂಜೆಯನ್ನು ಸಲ್ಲಿಸಿದ್ದು. ನೂರಕ್ಕೂ ಹೆಚ್ಚು ಪೋಷಕರು ಭಾಗವಹಿಸಿದ್ದರು.
ಎಸ್ ಆರ್ ಎಸ್ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಮತಿ ಸುಜಾತ ಲಿಂಗಾರೆಡ್ಡಿ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಪರಂಪರೆಯ ಮೌಲ್ಯಗಳನ್ನು, ಸಂಸ್ಕೃತಿಯನ್ನು ಬೆಳೆಸಬೇಕು ಎಂದು ಹೇಳಿದರು. ಶಾಲೆಯ ಪ್ರಾಂಶುಪಾಲರಾದ ಶ್ರೀ ವಿಜಯ್ ಬಿ.ಎಸ್ ರವರು ಗುರು ಪೂರ್ಣಿಮಾದ ಹಿನ್ನೆಲೆ ಹಾಗೂ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಪೋಷಕರು ಸಂತಸ ವ್ಯಕ್ತಪಡಿಸಿದ್ದು ಅಭಿಪ್ರಾಯವನ್ನು ತಿಳಿಸಿರುತ್ತಾರೆ