ಚಳ್ಳಕೆರೆ ತಾಲೂಕು ಕಾಡುಗೊಲ್ಲರ ಸಂಘದ ಪದಾಧಿಕಾರಿಗಳು ತಹಸೀಲ್ದಾರ್ ರೇಹಾನ್ ಪಾಷಾ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.
ಜಾತಿ ಪ್ರಮಾಣ ಪತ್ರ ನೀಡಲು ಸರ್ಕಾರದ ಆದೇಶ ಇದ್ದರೂ ಅಧಿಕಾರಿಗಳು ನಿರ್ಲಕ್ಷೃ ವಹಿಸುತ್ತಿದ್ದಾರೆ. ಸಮುದಾಯದಲ್ಲಿ ಶಿಕ್ಷಣ ಜಾಗೃತಿ ಇಲ್ಲ. ಸಾಮಾಜಿಕ ಬದಲಾವಣೆಗಾಗಿ ಸರ್ಕಾರದ ಸೌಲಭ್ಯಗಳು ಸಿಗಬೇಕಿದೆ. ಬಹುವರ್ಷಗಳ ಬೇಡಿಕೆಯಂತೆ ಕಾಡುಗೊಲ್ಲ ಹೆಸರಲ್ಲಿ ಜಾತಿ ಪ್ರಮಾಣ ಪತ್ರ ನೀಡುವ ಪದ್ಧತಿ ಜಾರಿಯಾಗಬೇಕಿದೆ.
ಆದರೆ, ತಾಲೂಕು ಆಡಳಿತ ಸ್ಪಂದಿಸುತ್ತಿಲ್ಲ. ಇದಕ್ಕೆ ಕಾರಣ ಏನೆಂಬುವುದನ್ನು ಲಿಖಿತ ರೂಪದಲ್ಲಿ ನೀಡಬೇಕೆಂದು ಪದಾಧಿಕಾರಿಗಳು ಒತ್ತಾಯಿಸಿದರು.
ಸಂಘದ ಅಧ್ಯಕ್ಷ ಬೂದಿಹಳ್ಳಿ ರಾಜಣ್ಣ, ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಶಿಧರ, ಮುಖಂಡರಾದ ಜಿ.ಕೆ.ವೀರಣ್ಣ, ಪೂಜಾರಿ, ತಿಪ್ಪೇಸ್ವಾಮಿ, ಕಾಟಪ್ಪನಹಟ್ಟಿ ವೀರೇಶ್, ಸಿದ್ದಾಪುರ ಮಂಜಣ್ಣ, ಸುರೇಶ್, ಮೂರ್ತಿ, ಭದ್ರಣ್ಣ, ಮಹಲಿಂಗಪ್ಪ, ನಿಂಗಣ್ಣ ಮತ್ತಿತರರು ಇದ್ದರು.

About The Author

Namma Challakere Local News
error: Content is protected !!